ಐಪಿಎಲ್‌ನ ಹತ್ತನೇ ಪಂದ್ಯದಲ್ಲಿ ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಸನ್‌ರೈಸರ್ಸ್ ಹೈದರಾಬಾದ್ ತಂಡವು ಈ ಸೀಸನ್ ಅನ್ನು ಗೆಲುವಿನೊಂದಿಗೆ ಆರಂಭಿಸಿದೆ. ಆದರೆ ಉಪ್ಪಳದಲ್ಲಿ ನಡೆದ ಪಂದ್ಯದಲ್ಲಿ ಆರೆಂಜ್ ಆರ್ಮಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತಿತು.
ಡೆಲ್ಲಿ ತಂಡ ಇದುವರೆಗೆ ಒಂದೇ ಒಂದು ಪಂದ್ಯ ಆಡಿದ್ದು, ಅ ಪಂದ್ಯದವಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಒಂದು ವಿಕೆಟ್‌ನಿಂದ ಸೋಲಿಸಿತ್ತು. ಇದೀಗಟಾಸ್ ಗೆದ್ದ ಹೈದರಾಬಾದ್ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್
ಜ್ಯಾಕ್ ಫ್ರೇಸರ್ ಮೆಗ್ಕುರ್ಕ್, ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮೋಹಿತ್ ಶರ್ಮಾ, ಮುಖೇಶ್ ಕುಮಾರ್.
ಸನ್‌ರೈಸರ್ಸ್ ಹೈದರಾಬಾದ್
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅನಿಕೇತ್ ವರ್ಮಾ, ಅಭಿನವ್ ಮನೋಹರ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಜೀಶನ್ ಅನ್ಸಾರಿ, ಹರ್ಷಲ್ ಪಟೇಲ್, ಮೊಹಮ್ಮದ್ ಶಮಿ.