ಕೋಲಾರ:- ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಗೊಬ್ಬರದ ಅಂಗಡಿ ಸುಟ್ಟು ಕರಕಲಾದ ಘಟನೆ ಕೋಲಾರದ ನೂತನ ಬಸ್ ನಿಲ್ದಾಣದ ಬಳಿ ಜರುಗಿದೆ.
ಇಲ್ಲಿನ ಶ್ರೀ ಮಾರುತಿ ಫರ್ಟಿಲೈಜರ್ಸ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಇದರಿಂದಾಗಿ ಮಳಿಗೆಯಲ್ಲಿದ್ದ ಲಕ್ಷಾಂತರ ರೂಪಾಯಿ ಬೆಲೆಯ ರಾಸಾಯನಿಕ ಗೊಬ್ಬರ ಹಾಗೂ ಇನ್ನಿತರೆ ಸಾಮಾಗ್ರಿಗಳು ಸುಟ್ಟುಹೋಗಿವೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೋಲಾರ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



