ಮೊಲಗಳನ್ನು ಬೇಟೆಯಾಡಿ ಮಾರಕಾಸ್ತ್ರ ಹಿಡಿದು ಮೆರವಣಿಗೆ: ‘ಕೈ’ ಶಾಸಕನ ಪುತ್ರ – ಸಹೋದರನಿಂದ ಕೃತ್ಯ!

0
Spread the love

ರಾಯಚೂರು:- ಯುಗಾದಿ ಹಬ್ಬದಂದು ಕಾಂಗ್ರೆಸ್ ಶಾಸಕ ಬಸನಗೌಡ ತುರವಿಹಾಳ ಪುತ್ರ ಹಾಗೂ ಸಹೋದರ, ಮೊಲಗಳನ್ನು ಬೇಟೆಯಾಡಿ ಬಳಿಕ ಮಾರಕಾಸ್ತ್ರ ಹಿಡಿದು ಮೆರವಣಿಗೆ ಮಾಡಿರುವ ಘಟನೆ ರಾಯಚೂರಿನಲ್ಲಿ ಜರುಗಿದೆ.

Advertisement

ಎಸ್, ಶಾಸಕ ಬಸನಗೌಡ ತುರವಿಹಾಳ ಸಹೋದರ ಸಿದ್ದನಗೌಡ ಹಾಗೂ ಪುತ್ರ ಸತೀಶ್ ಗೌಡ ಮೊಲಗಳನ್ನ ಕೊಂದು ಕಟ್ಟಿಗೆಗೆ ನೇತು ಹಾಕಿ ಮಾರಕಾಸ್ತ್ರ ಹಿಡಿದು ಸಂಭ್ರಮಿಸಿದ್ದಾರೆ. ಗ್ರಾಮದಲ್ಲಿ ನಡೆದ ಶಂಕರಲಿಂಗೇಶ್ವರ ಜಾತ್ರೆ ಹಿನ್ನೆಲೆ ಶಾಸಕನ ಕುಟುಂಬದ ಸದಸ್ಯರು ಮೊಲಗಳ ಬೇಟೆಯಾಡಿ ಮಾರಕಾಸ್ತ್ರಗಳನ್ನು ಹಿಡಿದು ಮುಖ್ಯರಸ್ತೆಗಳಲ್ಲಿ ಮೆರವಣಿಗೆ ಮಾಡಿದ್ದಾರೆ.

ಮೊಲಗಳ ಬೇಟೆಯಾಡುವುದು ಅರಣ್ಯ ಇಲಾಖೆ ಕಾಯ್ದೆಯಡಿ ಅಪರಾಧ ಕೃತ್ಯವಾದರೂ ಇದುವರೆಗೆ ಅರಣ್ಯ ಇಲಾಖೆಯಿಂದ ಯಾವುದೇ ಕ್ರಮ ಜರುಗಿಸಿಲ್ಲ. ಇನ್ನೂ ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನ ಹಿಡಿದು ಮೆರವಣಿಗೆ ಮಾಡಿದರೂ ಪೊಲೀಸ್ ಇಲಾಖೆ ಮಾತ್ರ ಕಂಡು ಕಾಣದಂತೆ ಕಣ್ಮುಚ್ಚಿ ಕುಳಿತಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.


Spread the love

LEAVE A REPLY

Please enter your comment!
Please enter your name here