ಶೀಘ್ರದಲ್ಲೇ ನನ್ನ ತಂದೆಯ ತಾಯ್ನಾಡಿಗೆ ಭೇಟಿ ನೀಡುತ್ತೇನೆ: ಭಾರತದ ಬಗ್ಗೆ ಸುನೀತಾ ವಿಲಿಯಮ್ಸ್ ಹೇಳಿದ್ದೇನು?

0
Spread the love

ವಾಷಿಂಗ್ಟನ್:- ಬಾಹ್ಯಾಕಾಶದಿಂದ ಭಾರತ ಅದ್ಭುತವಾಗಿ ಕಾಣುತ್ತದೆ ಎಂದು 9 ತಿಂಗಳ ಬಳಿಕ ಭೂಮಿಗೆ ಮರಳಿದ ಸುನೀತಾ ವಿಲಿಯಮ್ಸ್‌ ತಂದೆಯ ತಾಯ್ನಾಡಿನ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

Advertisement

ಬಾಹ್ಯಾಕಾಶದಲ್ಲಿನ ಹಲವಾರು ಕೌತುಕಗಳು, ಸಂಶೋಧನೆಗಳು ಹಾಗೂ ಭೂಮಿ ಕುರಿತು ಸುದ್ದಿಗೋಷ್ಠಿಯಲ್ಲಿ ಸುನೀತಾ ಅನುಭವ ಹಂಚಿಕೊಂಡಿದ್ದಾರೆ.

ನಾನು ಶೀಘ್ರದಲ್ಲೇ ನನ್ನ ತಂದೆಯ ತಾಯ್ನಾಡಿಗೆ ಭೇಟಿ ನೀಡಲಿದ್ದೇನೆ. ಮುಂದಿನ ಆಕ್ಸಿಯಮ್ ಕಾರ್ಯಾಚರಣೆಯಲ್ಲಿ ಭಾಗವಹಿಸಲಿರುವ ಭಾರತೀಯ ಪ್ರಜೆಗಳನ್ನು ಭೇಟಿ ಮಾಡುತ್ತೇನೆ. ನಮ್ಮ ಅನುಭವಗಳನ್ನು ಹಂಚಿಕೊಳ್ಳಬಹುದೆಂದು ನಾನು ಭಾವಿಸುತ್ತೇನೆ. ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ ಎಂದು ಬಣ್ಣಿಸಿದ್ದಾರೆ.

ಭಾರತ ಬಾಹ್ಯಾಕಾಶ ಜಗತ್ತಿನಲ್ಲಿ ತನ್ನ ನೆಲೆಯನ್ನು ಸ್ಥಾಪಿಸಿದೆ. ನಾನು ಅವರಿಗೆ ಸಹಾಯ ಮಾಡಲು ಹಿಂಜರಿಯುವುದಿಲ್ಲ. ಬಾಹ್ಯಕಾಶದಿಂದ ಭಾರತ ಅದ್ಭುತವಾಗಿ ಕಾಣುತ್ತದೆ. ಹಿಮಾಲಯದ ಮೇಲೆ ಹೋದಾಗಲೆಲ್ಲ ಅದ್ಬುತ ಚಿತ್ರಗಳು ಸಿಕ್ಕವು. ಗುಜರಾತ್ ಮತ್ತು ಮುಂಬೈ ದೀಪಗಳ ಜಾಲದಂತೆ ಕಾಣುತ್ತದೆ ಎಂದು ಸುನೀತಾ ವಿಲಿಯಮ್ಸ್‌ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here