ಹುಬ್ಬಳ್ಳಿ:-ಪವಿತ್ರ ರಂಜಾನ್ ಹಬ್ಬದಂದು ಹುಬ್ಬಳ್ಳಿಯಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಘಟನೆ ಜರುಗಿದೆ.
ನಗರದಲ್ಲಿ ರಂಜಾನ್ ಹಬ್ಬದ ನಿಮಿತ್ತ ಪ್ರಾರ್ಥನೆ ಸಲ್ಲಿಸುವ ವೇಳೆ ಸಂಘ ಪಾರಿವಾರದ ವಿರುದ್ಧ ಅವಹೇಳನಕಾರಿ ಪ್ಲೇ ಕಾರ್ಡ್ ಪ್ರದರ್ಶಿಸಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಮುಖಂಡನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಅಬ್ದುಲ್ ಗಪ್ಪುರ್ ಕುರಹಟ್ಟಿ ಬಂಧಿತ ಎಸ್‌ಡಿಪಿಐ ಮುಖಂಡ. ಪ್ರಾರ್ಥನೆ ವೇಳೆ ಎಸ್‌ಡಿಪಿಐ ಕಾರ್ಯಕರ್ತರು ಸಂಘ ಪರಿವಾರಗಳ ವಿರುದ್ಧ ಪ್ಲೇ ಕಾರ್ಡ್ ತೋರಿಸಿದ್ದರು. ಇದರಿಂದ ಆಕ್ರೋಶಗೊಂಡು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಉಪನಗರ ಪೊಲೀಸ್ ಠಾಣೆಯಲ್ಲಿ ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದರು.
ದೂರಿನ ಅನ್ವಯ ಅಬ್ದುಲ್ ಗಪ್ಪುರ್ ಕುರಹಟ್ಟಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಎಫ್‌ಐಆರ್ ದಾಖಲಾಗುತ್ತಿದ್ದಂತೆ ಅಬ್ದುಲ್ ಗಪ್ಪುರ್‌ನನ್ನು ಬಂಧಿಸಿದ ಪೊಲೀಸರು ತನಿಖೆ ನಡೆಸಿದ್ದಾರೆ. ಆರೋಪಿಗೆ ಕೋರ್ಟ್ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.