ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವಿನ ಐಪಿಎಲ್ ಪಂದ್ಯಕ್ಕಾಗಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಸಮಯವನ್ನು ವಿಸ್ತರಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ,
Advertisement
ನಮ್ಮ ಮೆಟ್ರೋ ದಿನಾಂಕ 02, 10, 18, ಹಾಗೂ 24ನೇ ಏಪ್ರಿಲ್ ಮತ್ತು 03, 13 ಹಾಗೂ 17ನೇ ಮೇ, 2025 ರಂದು ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ರಾತ್ರಿ 12.30ರ ವರೆಗೆ ವಿಸ್ತರಿಸಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.15 ಕ್ಕೆ ಹೊರಡಲಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ತಿಳಿಸಿದೆ.