ನಟ ದರ್ಶನ್‌ʼಗೆ ಬಿಗ್ ಶಾಕ್: ಇಂದು ಸುಪ್ರೀಂನಲ್ಲಿ ಅರ್ಜಿ ವಿಚಾರಣೆ – ಜಾಮೀನು ರದ್ದಾಗುತ್ತಾ?

0
Spread the love

ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ಸುಪ್ರೀಂಕೋರ್ಟ್​ನಲ್ಲಿನಡೆಯುತ್ತಿದೆ.

Advertisement

ದರ್ಶನ್ ಜಾಮೀನು ರದ್ದು ಮಾಡಲು ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಮನವಿ ಮಾಡಿದ್ದು, ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್‌, ಎ7 ಅನುಕುಮಾರ್‌, ಎ11 ನಾಗರಾಜ್, ಎ12 ಎಂ.ಲಕ್ಷ್ಮಣ್‌ ಹಾಗೋ ಎ 14 ಪ್ರದೂಶ್​ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಮಾ.18ಕ್ಕೆ ನಡೆಯಬೇಕಿತ್ತು. ವಿಚಾರಣೆಗೆ ಪಟ್ಟಿಯಾಗದ ಹಿನ್ನೆಲೆ ದರ್ಶನ್ ಪ್ರಕರಣದಲ್ಲಿನ ರಾಜ್ಯದ ವಿಶೇಷ ವಕೀಲ ಅನಿಲ್ ನಿಶಾನಿ ಅರ್ಜಿ ವಿಚಾರಣೆ ನಡೆಸುವಂತೆ ಪ್ರಸ್ತಾಪಿಸಿದ್ದರು. ಇದಕ್ಕೆ ಉತ್ತರಿಸಿದ ಕೋರ್ಟ್ ಏ.2 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿತ್ತು.

ಮಾ.18ಕ್ಕೂ ಮುನ್ನ ನಡೆದ ವಿಚಾರಣೆಯಲ್ಲಿ ಅರ್ಜಿ ವಿಚಾರಣೆಗೆ ಒಪ್ಪಿಕೊಂಡಿದ್ದ ಸುಪ್ರೀಂಕೋರ್ಟ್ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಹೈಕೋರ್ಟ್‌ನಲ್ಲಿ ಗೆಲುವು ಪಡೆದಂತೆ ಸುಪ್ರೀಂಕೋರ್ಟ್‌ನಲ್ಲಿಯೂ ಗೆಲುವು ಪಡೆಯಲು ಖ್ಯಾತ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ನೇಮಿಸಿಕೊಂಡಿದ್ದಾರೆ ಹಾಗೂ ಹೈಕೋರ್ಟ್‌ನಲ್ಲಿ ನಡೆದ ವಾದ ಪ್ರತಿವಾದದ ಎಲ್ಲ ದಾಖಲೆ ನೀಡಲಾಗಿದೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಸದ್ಯಕ್ಕೆ ಯಾವುದೇ ಬೆಳವಣಿಗೆ ಕಂಡು ಬಂದಿಲ್ಲ.

ನಟ ದರ್ಶನ್ 131 ದಿನಗಳ ಜೈಲುವಾಸದ ನಂತರ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಅ.30 ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ನಂತರ ಹೈಕೋರ್ಟ್ ಡಿ.13 ರಂದು ದರ್ಶನ್ ಮತ್ತು ಪ್ರಮುಖ ಆರೋಪಿ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು


Spread the love

LEAVE A REPLY

Please enter your comment!
Please enter your name here