HomeCrime Newsಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್‌ಪೆಕ್ಟರ್‌ಗೆ ಶಾಕ್! ಲೋಕಾ ದಾಳಿ ವೇಳೆ ಪರಾರಿಯಾದ ಪಿಐ ಕುಮಾರ್

ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್‌ಪೆಕ್ಟರ್‌ಗೆ ಶಾಕ್! ಲೋಕಾ ದಾಳಿ ವೇಳೆ ಪರಾರಿಯಾದ ಪಿಐ ಕುಮಾರ್

For Dai;y Updates Join Our whatsapp Group

Spread the love

ಬೆಂಗಳೂರು: ಅನ್ನಪೂರ್ಣೇಶ್ವರಿ ಪೊಲೀಸ್ ಇನ್ಸ್‌ಪೆಕ್ಟರ್‌ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, 4 ಕೋಟಿ ರೂ. ಮೌಲ್ಯದ ಮನೆ ಮಾರಾಟದಲ್ಲಿ ಭ್ರಷ್ಟಾಚಾರ ಆರೋಪದಡಿ ಲೋಕಾಯುಕ್ತ ದಾಳಿ ನಡೆಸಿದಾಗ ಇನ್ಸ್‌ಪೆಕ್ಟರ್ ಎಸ್ಕೇಪ್‌ ಆಗಿದ್ದಾರೆ. ಹೌದು ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್ ಅವರಿಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ.

ವಿಚಾರ ತಿಳಿದು ಮನೆಯಲ್ಲೇ ಪೊಲೀಸ್ ಜೀಪ್ ಬಿಟ್ಟು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಕುಮಾರ್ ಪರಾರಿ ಆಗಿದ್ದಾರೆ. ನಿನ್ನೆ ಸಂಜೆ 5 ಗಂಟೆಯಿಂದ ಮುಂಜಾನೆ 3 ಗಂಟೆವರೆಗೆ ಕಾರ್ಯಾಚರಣೆ ಮಾಡಲಾಗಿದೆ.

ಸಿವಿಲ್ ಕಂಟ್ರ್ಯಾಕ್ಟರ್ ಚನ್ನೇಗೌಡ ಪತ್ನಿ ಅನುಷಾ ಎಂಬುವವರಿಗೆ ಅನ್ನಪೂರ್ಣೇಶ್ವರಿ ನಗರ ಠಾಣೆ ಪಿಐ ಕುಮಾರ್ನಿಂದ ಕಿರುಕುಳ ಆರೋಪ ಕೇಳಿಬಂದಿದೆ. ಸುಳ್ಳು ಕೇಸ್ ದಾಖಲಿಸಿ ಚನ್ನೇಗೌಡಗೆ ಸೇರಿದ 4 ಕೋಟಿ ರೂ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹಾಕಿದ್ದು, ಕಡಿಮೆ ಮೊತ್ತಕ್ಕೆ ನೋಂದಣಿ ಮಾಡಿಕೊಡುವಂತೆ ಪಿಐ ಕಿರುಕುಳ ಆರೋಪ ಮಾಡಲಾಗಿದೆ.

ಈ ಹಿಂದೆ ದಾಖಲಾಗಿದ್ದ ಪ್ರಕರಣಕ್ಕೆ ಬಿ ರಿಪೋರ್ಟ್ ಹಾಕುತ್ತೇನೆ. ಮನೆ ಬರೆದುಕೊಡಿ ಎಂದು ಇನ್ಸ್‌ಪೆಕ್ಟರ್ ಕುಮಾರ್ ಕಿರುಕುಳ ನೀಡಿದ್ದು, ಈ ಹಿಂದೆ ಚನ್ನೇಗೌಡ ಮನೆಗೆ ಕೆಲ ಪುಂಡರನ್ನು ನುಗ್ಗಿಸಿ ದಾಂದಲೆ ಮಾಡಿದ್ದಾರೆ. ಈ ವೇಳೆ ಸಿವಿಲ್ ಕಂಟ್ರ್ಯಾಕ್ಟರ್ ಚನ್ನೇಗೌಡ ವಿಡಿಯೋ ಮಾಡಿಕೊಂಡಿದ್ದರು. ಚನ್ನೇಗೌಡನನ್ನು ಠಾಣೆಗೆ ಕರೆಸಿ ಒತ್ತಾಯಪೂರ್ವಕವಾಗಿ ಅಗ್ರಿಮೆಂಟ್ಗೆ ಸಹಿ ಮಾಡಿಸಿ, ಆನ್‌ಲೈನ್ ಮೂಲಕ 4 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಸೋದರ ಸಂಬಂಧಿ ಗವಿಗೌಡ, ದಿವ್ಯಾ ಹೆಸರಿಗೆ ಮನೆ ನೋಂದಣಿಗೆ ಒತ್ತಡ ಹೇರಿದ್ದು, ನಿನ್ನೆ ಸಂಜೆ ಅಗ್ರಿಮೆಂಟ್ಗೆ ಸಹಿ ಹಾಕಿಸಲು ನಾಗರಬಾವಿಯ ಖಾಸಗಿ ಹೋಟೆಲ್ ಗೆ ಚನ್ನೇಗೌಡ ಪತ್ನಿ ಅನುಷಾರನ್ನು ಕರೆಸಿದ್ದರು. ಈ ವೇಳೆ ಲೋಕಾ ದಾಳಿ ವಿಚಾರ ತಿಳಿಯುತ್ತಿದ್ದಂತೆ ಕುಮಾರ್ ಪರಾರಿ ಆಗಿದ್ದಾರೆ. ಆದರೆ, ಇಬ್ಬರು ಕಾನ್‌ಸ್ಟೇಬಲ್‌ಗಳು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಕಾನ್‌ಸ್ಟೇಬಲ್‌ಗಳಾದ ಉಮೇಶ್, ಅನಂತ್ ಸೋಮಶೇಖರ್ ಆರಾಧ್ಯ, ಖರೀದಿದಾರ ಗವಿಗೌಡ, ದಿನೇಶ್ ಸೇರಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!