ನವದೆಹಲಿ: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳಿಗೆ ಸಿಕ್ಕಿರುವ ಜಾಮೀನು ರದ್ದುಗೊಳಿಸುವಂತೆ ಬೆಂಗಳೂರು ಪೊಲೀಸ್ ಇಲಾಖೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಮುಂದೂಡಿಕೆ ಮಾಡಿದೆ.
Advertisement
ದರ್ಶನ್, ಪವಿತ್ರಾ ಗೌಡ ಮತ್ತು ಇತರ ಐವರು ಆರೋಪಿಗಳ ಜಾಮೀನು ವಿಷಯವನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದೀವಾಲ ಮತ್ತು ಆರ್. ಮಹದೇವನ್ ಅವರ ಪೀಠವು ಪರಿಶೀಲಿಸಿತ್ತು.
ಬೆಂಗಳೂರು ಪೊಲೀಸ್ ಇಲಾಖೆ ಹೈಕೋರ್ಟ್ನ ಜಾಮೀನು ಆದೇಶಕ್ಕೆ ತಡೆ ನೀಡುವಂತೆ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿತ್ತು. ಇದೀಗ ದರ್ಶನ್ ಪ್ರಕರಣ ಏಪ್ರಿಲ್ 22 ಕ್ಕೆ ಮುಂದೂಡಿಕೆ ಆಗಿದೆ. ಏಪ್ರಿಲ್ 22 ರೊಳಗೆ ಆಕ್ಷೇಪಣೆ ಸಲ್ಲಿಸಲು ಆರೋಪಿ ಪರ ವಕೀಲರಿಗೆ ಸೂಚನೆ ನೀಡಿದೆ ಕೋರ್ಟ್. ಏಪ್ರಿಲ್ 22 ರಂದು ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.