ಹುಬ್ಬಳ್ಳಿ: ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕುಂದಗೋಳ ನಿವಾಸಿಯಾದ 20 ವರ್ಷದ ಕಾವ್ಯ (ಹೆಸರು ಬದಲಾಯಿಸಲಾಗಿದೆ) ಎಂಬ ಯುವತಿ, ಸ್ಥಳೀಯ ಮುಸ್ಲಿಂ ಯುವಕ ಸಿರಾಜ್‌ನಿಂದ ದೀರ್ಘಕಾಲದಿಂದ ಕಿರುಕುಳಕ್ಕೆ ಒಳಗಾಗಿದ್ದಳು ಎಂದು ಆರೋಪಿಸಲಾಗಿದೆ.
Advertisement
ಸಿರಾಜ್ ಯುವತಿಯ ಖಾಸಗಿ ಫೋಟೋಗಳನ್ನು ತನ್ನ ಬಳಿ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕಿರುಕುಳಕ್ಕೆ ಬೇಸತ್ತು, ಯುವತಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಈ ಘಟನೆಯ ನಂತರ ಯುವತಿಯನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಘಟನೆಯ ಬಗ್ಗೆ ಸ್ಥಳೀಯ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.