ಬೆಂಗಳೂರು: ಉತ್ತರ ಕರ್ನಾಟಕ 9 ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿಗಳು ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ತೆರೆದಿರುತ್ತವೆ ಎಂದು ಸರ್ಕಾರ ಆದೇಶ ಹೊರಡಿಸಿದೆ. ಹೌದು ಕರ್ನಾಟಕದಲ್ಲಿ ಈ ಬಾರಿ ಬೇಸಿಗೆ ಬಿಸಿಲ ಪ್ರತಾಪ ಶುರುವಾಗಿದೆ.
ಇದರಿಂದ ಜನರು ಆಚೆ ಬರಲು ಪರದಾಡುವಂತಾಗಿದೆ. ಇನ್ನು ಬಿಸಿಲಿನಿಂದ ಅನಾರೋಗ್ಯ ಕಾಡುವ ಆತಂಕ ಎದುರಾಗಿದೆ. ಇದರಿಂದ ಸಾರ್ವಜನಿಕರಿಗೆ ಹಾಗೂ ರಾಜ್ಯ ಸರ್ಕಾರಿ ನೌಕರರ ಅನುಕೂಲಕ್ಕಾಗಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಲಾಗಿದೆ.
ಲ್ಯಾಣ ಕರ್ನಾಟಕದ 7 ಜಿಲ್ಲೆಗಳು ಹಾಗೂ ಕಿತ್ತೂರು ಕರ್ನಾಟಕದ 2 ಜಿಲ್ಲೆಗಳು ಸೇರಿದಂತೆ ಒಟ್ಟು 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇನ್ಮುಂದೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮಾತ್ರ ತೆರೆದಿರುತ್ತವೆ.
ಏಪ್ರಿಲ್ ಮತ್ತು ಮೇ ಈ ಎರಡು ತಿಂಗಳು ಅವಧಿಯಲ್ಲಿ ಸರ್ಕಾರಿ ಕಚೇರಿಗಳಿಗೆ ಬೆಳಗಿನ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೆಲಸದ ಅವಧಿ ನಿಗದಿ ಮಾಡಲಾಗಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳು ಹಾಗೂ ಕಿತ್ತೂರು ಕರ್ನಾಕದ (ಬೆಳಗಾವಿ ವಿಭಾಗ) ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಈ ಬದಲಾವಣೆ ಅವಧಿ ಅನ್ವಯವಾಗಲಿದೆ.