ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

0
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು ಶೂನ್ಯಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಯ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.

Advertisement

ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಪರೇಡ್ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು. 1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here