Anwar Manippady: ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ!

0
Spread the love

ಬೆಂಗಳೂರು:- ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬಂದಿವೆ. ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಬೆದರಿಕೆ ಕರೆ ಬಂದಿದ್ದು, ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ.

Advertisement

ಇಂಟರ್ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಅನ್ವರ್ ಮಾಣಿಪ್ಪಾಡಿ ಅವರು ಸದ್ಯ ಮಂಗಳೂರಿನಲ್ಲಿರುವ ನಿವಾಸದಲ್ಲಿ ವಾಸವಾಗಿದ್ದಾರೆ. ದೂರು ಆಧರಿಸಿದ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ:

ಕೊನೆಗೂ ವಕ್ಫ್ ತಿದ್ದುಪಡಿ ಮಸೂದೆಗೆ ಸಂಸತ್ತಿನ ಅನುಮೋದನೆ ಪಡೆಯುವಲ್ಲಿ ಕೇಂದ್ರದ ಎನ್​​ಡಿಎ ಸರ್ಕಾರ ಯಶಸ್ವಿಯಾಗಿದೆ. ಮಸೂದೆಯು ಇನ್ನು ರಾಷ್ಟ್ರಪತಿಗಳ ಅನುಮೋದನೆಗೆ ಹೋಗಲಿದ್ದು, ಅವರ ಸಹಿಯ ನಂತರ ಕಾನೂನಿನ ರೂಪ ಪಡೆಯಲಿದೆ.


Spread the love

LEAVE A REPLY

Please enter your comment!
Please enter your name here