ಗದಗ: ಇತ್ತೀಚೆಗೆ ಬೆಂಗಳೂರಿನಲ್ಲಿ ರಾಜ್ಯ ಸರಕಾರದ ವತಿಯಿಂದ 2022ನೇ ಸಾಲಿನ ಮುಖ್ಯಮಂತ್ರಿ ಪೊಲೀಸ್ ಪದಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸ್ವೀಕರಿಸಿದ ಗದಗ ಜಿಲ್ಲಾ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ವಿಭಾಗದ ಹಿರಿಯ ಪೊಲೀಸ್ ಪೇದೆ ಆನಂದಸಿಂಗ್ ಪಿ ದೊಡ್ಡಮನಿ ಅವರನ್ನು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮುಖ್ಯಮಂತ್ರಿ ಪದಕವನ್ನು ತೊಡಿಸುವ ಮೂಲಕ ಗೌರವಿಸಿದರು. ಈ ಸಂದರ್ಭಧಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂದಕದ ಇದ್ದರು.
Advertisement