HomeKarnataka Newsಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸಾವು, 11 ಜನ ಗಂಭೀರ!

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸಾವು, 11 ಜನ ಗಂಭೀರ!

For Dai;y Updates Join Our whatsapp Group

Spread the love

ಕಲಬುರಗಿ:- ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೊನ್ನ ಕ್ರಾಸ್ ಹತ್ತಿರ ಜರುಗಿದೆ. ಘಟನೆ ಪರಿಣಾಮ 11 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಾಜೀದ್ , ಮೆಹಬೂಬಿ , ಪ್ರಿಯಾಂಕಾ , ಮೆಹಬೂಬ್ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದವರು. ಇವರೆಲ್ಲರೂ ಬಾಗಲಕೋಟೆ ಜಿಲ್ಲೆಯವರು ಎಂದು ತಿಳಿದು ಬಂದಿದೆ.

ನಿಂತಿದ್ದ KA-02-C 3582 ಸಂಖ್ಯೆ ಲಾರಿಗೆ ಹಿಂಬದಿಯಿಂದ ಬಂದ KA-28-A-7224 ಎಂಬ ಸಂಖ್ಯೆಯ ಟೆಂಪೋ ಟ್ರಾವೆಲರ್ ಗುದ್ದಿದ ಪರಿಣಾಮ ಈ ಅವಘಡ ಸಂಭವಿಸಿದೆ.

ಈ ಕುಟುಂಬವು, ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಾಗಲಕೋಟೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ಆಗಮಿಸುತ್ತಿದ್ದರು. ಆದರೆ ಇದೇ ವೇಳೆ ನಿಂತ ಲಾರಿಗೆ ಹಿಂದಿನಿಂದ ಬಂದ ಟಿಟಿ ವಾಹನ ಡಿಕ್ಕಿ ಹೊಡೆದಿದೆ. 15ಕ್ಕೂ ಹೆಚ್ಚು ಭಕ್ತರಿದ್ದ ಟಿಟಿ ವಾಹನ ಏಕಾಏಕಿ ಪಂಚರ್ ಆಗಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ 5 ಮಂದಿ ಪ್ರಾಣಬಿಟ್ಟಿದ್ದಾರೆ. ಇನ್ನೂ, ಈ ಅಪಘಾತದಲ್ಲಿ ಗಾಯಗೊಂಡ ಹಲವರನ್ನು ಕಲಬುರಗಿ ಹಾಗೂ ಜೇವರ್ಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಜೇವರ್ಗಿ ಹಾಗೂ ನೆಲೋಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!