ಅಕ್ರಮ ಸಂಬಂಧ ಶಂಕೆ: ನಡುರಸ್ತೆಯಲ್ಲೇ ಪತ್ನಿ ಕೊಂದು ಎಸ್ಕೇಪ್ ಆಗುತ್ತಿದ್ದ ಪತಿ ಅರೆಸ್ಟ್!

0
Spread the love

ಬೆಂಗಳೂರು:- ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿ ನಗರದ ನಡುರಸ್ತೆಯಲ್ಲೇ ವ್ಯಕ್ತಿವೋರ್ವ ಪತ್ನಿಯನ್ನು ಚಾಕುವಿನಿಂದ ಬರ್ಬರವಾಗಿ ಹತ್ಯೆಗೈದ ಘಟನೆ ಜರುಗಿದೆ.

Advertisement

ಮೃತ ಪತ್ನಿಯನ್ನು ಬಾಗೇಪಲ್ಲಿ ಮೂಲದ ಶಾರದ ಮೃತ ಪತ್ನಿ. ಕೊಲೆಗಾರ ಪತಿಯನ್ನು ಕೃಷ್ಣ ಎಂದು ಗುರುತಿಸಲಾಗಿದೆ. ಅಕ್ರಮ ಸಂಬಂಧ ಹಿನ್ನೆಲೆ ಕೊಲೆ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಆಗ್ನೇಯ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಸೋಕೋ ಟೀಂ ಆಗಮಿಸಿದೆ. ಮೃತದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಪತ್ನಿ ಕೆಲಸ ಮುಗಿಸಿ ನಿರ್ಜನ ರಸ್ತೆಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪತಿ ದಾಳಿ ನಡೆಸಿದ್ದಾನೆ. ಆರೋಪಿ ಪತ್ನಿಯನ್ನು ಕೊಲ್ಲಲು ಎರಡು ಚಾಕು ತಂದಿದ್ದ. ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಎಸ್ಕೇಪ್ ಆಗುತ್ತಿದ್ದ ಆರೋಪಿ ಪತಿಯನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here