ಮಕ್ಕಳಿಗೆ ಶಿಸ್ತುಬದ್ಧ ಜೀವನ ಕಲಿಸಿ: ಯುವ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಕೃಷ್ಣಗೌಡ ಪಾಟೀಲ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳು ಸಣ್ಣಪುಟ್ಟ ವಿಷಯಗಳಿಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ. ಇದರಿಂದ ಮುಕ್ತವಾಗಲು ದೈಹಿಕ ಶಿಕ್ಷಣ ಸಹಕಾರಿಯಾಗಿದೆ ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಅಭಿಪ್ರಾಯಪಟ್ಟರು.

Advertisement

ಅವರ ಹುಲಕೋಟಿಯ ಸ್ವಾಮಿ ವಿವೇಕಾನಂದ ಪದವಿಪೂರ್ವ ಮಹಾವಿದ್ಯಾಲಯದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾ ಪಂಚಾಯಿತಿ, ಗದಗ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಶಾಖೆ ಗದಗ, ಕರ್ನಾಟಕ ರಾಜ್ಯ ಸರಕಾರಿ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗದಗ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್-2 ಗದಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2025-26ನೇ ಸಾಲಿನ ಗದಗ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮಕ್ಕಳಲ್ಲಿನ ಈ ಖಿನ್ನತೆಗೆ ದುಶ್ಚಟಗಳು, ಪಾಲಕರ ನಡುವಳಿಕೆ, ನಿರ್ಲಕ್ಷ್ಯ ಮತ್ತು ಸಮಾಜದಲ್ಲಿನ ಕೆಲವು ಬದಲಾವಣೆಗಳು ಕಾರಣವಾಗಬಹುದು. ಇದರಿಂದ ಮಕ್ಕಳು ಹೊರಬರಲು ದೈಹಿಕ ಶಿಕ್ಷಣ ಶಿಕ್ಷಕರು ವಯಕ್ತಿಕ ಕಾಳಜಿ ವಹಿಸಿ ದೈಹಿಕ ಶಿಕ್ಷಣದ ಪ್ರಾಮುಖ್ಯತೆ ಬಗ್ಗೆ ತಿಳಿಸಿ ಸಮಯ ಪ್ರಜ್ಞೆ, ಸ್ವಚ್ಛತೆ, ಪ್ರಾಮಾಣಿಕತೆ, ಶಿಸ್ತುಬದ್ಧ ಜೀವನ ನಡೆಸುವಂತೆ ಬೋಧನೆ ಮಾಡಿದಾಗ ಮಾತ್ರ ಸರ್ವಾಂಗೀಣ ಬೆಳವಣಿಗೆ ಮತ್ತು ಒಳ್ಳೆಯ ಜೀವನ ನಡೆಸಲು ಸಾಧ್ಯ ಎಂದರು.

ಮುಖ್ಯ ಅತಿಥಿಗಳಾಗಿ ಹುಲಕೋಟಿ ಗ್ರಾ.ಪಂ ಅಧ್ಯಕ್ಷರಾದ ನಾಗರತ್ನ ಬಾಳೆಹಳ್ಳಿಮಠ, ಡಾ. ಶೇಖರ ಸಜ್ಜನರ, ಡೈಟ್ ಪ್ರಾಚಾರ್ಯ ಜಿ.ಎಲ್. ಬಾರಾಟಕ್ಕೆ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಗದಗ ಜಿಲ್ಲಾಧ್ಯಕ್ಷ ಬಿ.ಎಫ್. ಪೂಜಾರ, ಮಾಧ್ಯಮಿಕ ಶಾಲಾ ನೌಕರರ ಸಂಘದ ಗದಗ ಜಿಲ್ಲಾಧ್ಯಕ್ಷ ಎಂ.ಕೆ. ಲಮಾಣಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗದಗ ಜಿಲ್ಲಾಧ್ಯಕ್ಷ ವ್ಹಿ.ಎಂ. ಹಿರೇಮಠ, ರವಿ ದಂಡಿನ, ಸಿ.ಬಿ. ಕರಿಕಟ್ಟಿ, ಮೋಹನ ದುರಗಣ್ಣವರ, ಏಕನಾಥಗೌಡ್ರ ಕರಿರಾಯನಗೌಡ್ರ, ಬಿ.ಕೆ. ನಿಂಬನಗೌಡ್ರ, ವಸಂತ ಕಲಕಂಬಿ, ರಾಜು ಚವ್ಹಾಣ, ಶರಣಪ್ಪ ನಾಗರಹಳ್ಳಿ, ಎಸ್.ಆರ್. ಬಂಡಿ, ಅವರಡ್ಡಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ.ಎಂ. ಹವಳದ, ಗದಗ ಗ್ರಾಮೀಣ ದೈಹಿಕ ಶಿಕ್ಷಣಾಧಿಕಾರಿ ಟಿ.ಎಸ್. ಪವಾರ, ಗದಗ ಶಹರ ದೈಹಿಕ ಶಿಕ್ಷಣಾಧಿಕಾರಿ ಜೆ.ಬಿ. ಅಣ್ಣಿಗೇರಿ, ಎನ್.ಆರ್. ನಿಡಗುಂದಿ, ಬಸವಣ್ಣೆಪ್ಪ ಬಿ.ಮುಂಡರಗಿ, ಆರ್.ಎಸ್. ನರೇಗಲ್ ಮುಂತಾದವರು ಉಪಸ್ಥಿತರಿದ್ದರು.

ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ತೀಡಾಪಟುಗಳನ್ನು ಸನ್ಮಾನಿಸಲಾಯಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಆಜಾದ್ ಮಹಮ್ಮದ್, ಈಗಿನ ಹೊಸ ಕ್ರೀಡಾ ನಿಯಮಗಳನ್ನು ಒಳಗೊಂಡಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು. ಜೆ.ಬಿ. ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಎಂ.ಆರ್. ಪೂಜಾರ ವಂದಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಆರ್.ಎಸ್. ಬುರಡಿ, 2025-26ನೇ ಸಾಲಿನ ದೈಹಿಕ ಶಿಕ್ಷಣದ ಕ್ರೀಡಾ ಚಟುವಟಿಕೆಗಳು ಹೇಗಿರಬೇಕು ಎಂಬ ದೃಷ್ಟಿಕೋನವನ್ನು ಸಿದ್ಧಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಕಾರ್ಯಗಾರ ಆಯೋಜನೆ ಮಾಡಲಾಗಿದೆ. ಮಕ್ಕಳಲ್ಲಿ ಸರ್ವಾಂಗೀಣ ಬೆಳವಣಿಗೆ, ನಾಯಕತ್ವ ಗುಣ ಬೆಳೆಸುವದು, ಸೋಲನ್ನು ಒಪ್ಪಿಕೊಳ್ಳುವ ಮನೋಭಾವ ಬೆಳೆಸಿ, ಅವರ ಜೀವನದ ಆಮೂಲಾಗ್ರ ಬದಲಾವಣೆ ಮಾಡುವಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದರು.


Spread the love

LEAVE A REPLY

Please enter your comment!
Please enter your name here