HomeIndia Newsರೋಲರ್‌ ಕೋಸ್ಟರ್‌ ಅವಘಡ: ಕೆಲವೇ ತಿಂಗಳಲ್ಲಿ ಹಸೆಮಣೆ ಏರಬೇಕಿದ್ದ ಮಹಿಳೆ ಸಾವು!

ರೋಲರ್‌ ಕೋಸ್ಟರ್‌ ಅವಘಡ: ಕೆಲವೇ ತಿಂಗಳಲ್ಲಿ ಹಸೆಮಣೆ ಏರಬೇಕಿದ್ದ ಮಹಿಳೆ ಸಾವು!

For Dai;y Updates Join Our whatsapp Group

Spread the love

ನವದೆಹಲಿ:– ಕೆಲವೇ ತಿಂಗಳುಗಳಲ್ಲಿ ಹಸೆಮಣೆ ಏರಬೇಕಿದ್ದ ಮಹಿಳೆ ರೋಲರ್‌ ಕೋಸ್ಟರ್‌ ಅವಘಡದಲ್ಲಿ ಸಾವನ್ನಪ್ಪಿರುವ ಘಟನೆ ನವದೆಹಲಿಯಲ್ಲಿ ಜರುಗಿದೆ.

24 ವರ್ಷದ ಪ್ರಿಯಾಂಕಾ ಮೃತ ಮಹಿಳೆ. ದೆಹಲಿಯ ಹೊರವಲಯದಲ್ಲಿರುವ ಜನಪ್ರಿಯ ಮನೋರಂಜನಾ ಉದ್ಯಾನವನದಲ್ಲಿ ಈ ದುರಂತ ಸಂಭವಿಸಿದೆ. ನಿಶ್ಚಿತಾರ್ಥವಾದ ವರನೊಂದಿಗೆ ನೈಋತ್ಯ ದೆಹಲಿಯ ಕಪಶೇರಾ ಬಳಿಯ ಫನ್ ಎನ್ ಫುಡ್ ವಾಟರ್ ಪಾರ್ಕ್‌ಗೆ ಭೇಟಿ ನೀಡಿದ್ದರು. ಈ ವೇಳೆ ರೋಲರ್‌ ಕೋಸ್ಟರ್‌ ಆಡುವಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ಪ್ರಿಯಾಂಕಾ ತನ್ನ ನಿಶ್ಚಿತ ವರ ನಿಖಿಲ್ ಜೊತೆ ವಾಟರ್ & ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಹೋಗಿದ್ದರು. ಸ್ವಿಂಗ್ ತರಹದ ರೈಡ್‌ನಲ್ಲಿ ಕುಳಿತಿದ್ದ ಪ್ರಿಯಾಂಕಾ, ಸ್ಟ್ಯಾಂಡ್ ಮುರಿದಾಗ ಎತ್ತರದಿಂದ ಕೆಳಗೆ ಬಿದ್ದರು. ಗಂಭೀರ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಪ್ರಿಯಾಂಕಾ 2023ರ ಜನವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 2026 ರ ಫೆಬ್ರವರಿಗೆ ಮದುವೆ ನಿಗದಿಯಾಗಿತ್ತು. ಆದರೆ ವಿಧಿಯಾಟ ಬಾಳಿ ಬದುಕಬೇಕಾಗಿದ್ದ ಮಹಿಳೆ ಇದೀಗ ಇಹಲೋಕ ತ್ಯಜಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!