ರಾಯಚೂರು:- ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಾಕಾಪುರ ಗ್ರಾಮದಲ್ಲಿರುವ ಗ್ರಾನೈಟ್ ಗಣಿಯಲ್ಲಿ ಸಿಡಿಮದ್ದು ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಅಲ್ಲದೇ ಘಟನೆಯಲ್ಲಿ ಮತ್ತೋರ್ವನಿಗೆ ಗಂಭೀರಗಾಯವಾಗಿದೆ. ವೆಂಕಟೇಶ್ ಮೃತ ಕಾರ್ಮಿಕ. ಈತ ಜಿಲ್ಲೆಯ ಇಲಕಲ್ ತಾಲೂಕಿನ ಮೆಣಸಿಗೆರಿ ಗ್ರಾಮದ ನಿವಾಸಿ ಎನ್ನಲಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಮಾಲಿಂಗಪ್ಪ ಎಂದು ಗುರುತಿಸಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮ ಗಾಳಿಗೆ ತೂರಿ ಅಕ್ರಮ ಗಣಿಗಾರಿಕೆ ಆರೋಪ ಕೇಳಿ ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.