ಕಲಬುರಗಿ:- ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತಿಥಿ ಶಿಕ್ಷಕ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ.
Advertisement
ಕಾಮುಕ ಅತಿಥಿ ಶಿಕ್ಷಕನನ್ನು ಶಿವರಾಜ್ ಎಂದು ಗುರುತಿಸಲಾಗಿದೆ. ಈತ 14 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ರೇಪ್ ಮಾಡಿದ್ದಾನೆ. ಅದೇ ಗ್ರಾಮದ ಶಾಲೆಯಲ್ಲಿ ಹಲವು ದಿನಗಳಿಂದ ಶಿವರಾಜ್ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ.
ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದಿದ್ದಾಗ ಮನೆಗೆ ನುಗ್ಗಿ ಶಿವರಾಜ್ ಅತ್ಯಾಚಾರ ಎಸಗಿದ್ದ. ಮಾದನಹಿಪ್ಪರಗಾ ಪೊಲೀಸರು ಶಿವರಾಜ್‌ನನ್ನು ಬಂಧಿಸಿದ್ದು, ಪೋಕ್ಸೋ ಕೇಸ್ ದಾಖಲಾಗಿದೆ.