ಬೆಂಗಳೂರು :- ಕರ್ನಾಟಕದಲ್ಲಿ ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ. ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತುರದಿಂದ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಅಂತೂ ಇಂತೂ ಗುಡ್ ನ್ಯೂಸ್ ಸಿಕ್ಕಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಅಂದೆ ಮಧ್ಯಾಹ್ನ 1.30ಕ್ಕೆ ವೆಬ್ಸೈಟ್ನಲ್ಲಿ PUC ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಇದ್ದಲ್ಲೇ ಆನ್ ಲೈನ್ ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ.
ರಿಸಲ್ಟ್ ನೋಡುವುದು ಎಲ್ಲಿ?
karresults.nic.in
kseab.karnataka.gov.in
ಈ ಎರಡು ವೆಬ್ಸೈಟ್ ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.
ಆನ್ಲೈನ್ ನಲ್ಲಿ ಫಲಿತಾಂಶ ನೋಡುವುದ್ಹೇಗೆ?
ಅಧಿಕೃತ ವೆಬ್ಸೈಟ್ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
ಹೋಂ ಪೇಜ್ ನಲ್ಲಿ, Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್ವರ್ಡ್ ನಮೂದಿಸಬೇಕು.
Second PU Results 2025 ಎಂಬುದು ಸ್ಕ್ರೀನ್ ನಲ್ಲಿ ಕಾಣಿಸುತ್ತದೆ. ನಂತರ ರಿಸಲ್ಟ್ ನೋಡಬಹುದು. ಅಲ್ಲಿಯೇ ಪಿಡಿಎಫ್ ಡೌನ್ಲೋಡ್ ಮಾಡಲು ಅವಕಾಶ ಇರುತ್ತದೆ.


