ಗದಗ ಜಿಲ್ಲೆಯಲ್ಲೊಂದು ಹೀನ ಕೃತ್ಯ: ಮಗಳನ್ನೇ ಗರ್ಭಿಣಿ ಮಾಡಿದ ನೀಚ ತಂದೆ!

1
Spread the love

ಗದಗ:- ಜಿಲ್ಲೆಯಲ್ಲೊಂದು ಹೇಯಕೃತ್ಯವೊಂದು ಬೆಳಕಿಗೆ ಬಂದಿದೆ. ಸ್ವಂತ ಮಗಳ ಮೇಲೆ ಪಾಪಿ ತಂದೆಯೋರ್ವ ಕಳೆದ 1 ವರ್ಷದಿಂದ ನಿರಂತರ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅಲ್ಲದೇ ಅಪ್ರಾಪ್ತ ಬಾಲಕಿ ಇದೀಗ ಗರ್ಭಿಣಿ ಆಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಘಟನೆ ಬೆಳಕಿಗೆ ಬರುತ್ತಿದ್ದಂತೆ ಕಾಮುಕ ತಂದೆಯನ್ನು ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಹೌದು, ಈ ಘಟನೆ ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದ್ದು, 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸುಮಾರು 55 ವರ್ಷದ ತಂದೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಕಳೆದ ಒಂದು ವರ್ಷದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ ನಡೆಸುತ್ತಿದ್ದ.

ಅತ್ಯಾಚಾರದ ನಂತರ ಯಾರಿಗೂ ಹೇಳದಂತೆ ಬೆದರಿಕೆ ಹಾಕುತ್ತಿದ್ದ. ಅಕಸ್ಮಾತ್ ಯಾರ ಮುಂದಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಸಂತ್ರಸ್ತೆ ಬಾಲಕಿ ಆರೋಪಿಸಿದ್ದಾಳೆ. ಇದೀಗ ಸಂತ್ರಸ್ತೆ ತಾಯಿಯೇ ಗಂಡನ ವಿರುದ್ಧ ದೂರು ಕೊಟ್ಟಿದ್ದಾರೆ. ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಡಿಎನ್‌ಎ ಪರೀಕ್ಷೆ ಒಳಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ. ಈ ಕುರಿತು ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.


Spread the love

1 COMMENT

  1. ಕಾಲಗರ್ಭದಲ್ಲಿ ಹುಡುಕಿದರೆ ಇನ್ನೂ ಎಂಥೆಂತಾ ಅದ್ಬುತ
    ಗಳು ಸಿಗಬಹುದು ನಮ್ಮಲ್ಲಿ

LEAVE A REPLY

Please enter your comment!
Please enter your name here