HomeKarnataka News2nd Puc Result: ಪರೀಕ್ಷೆಯಲ್ಲಿ 1st ಕ್ಲಾಸ್ ಬಂದ್ರೂ ಸೂಸೈಡ್ ಮಾಡಿಕೊಂಡ ವಿದ್ಯಾರ್ಥಿ!

2nd Puc Result: ಪರೀಕ್ಷೆಯಲ್ಲಿ 1st ಕ್ಲಾಸ್ ಬಂದ್ರೂ ಸೂಸೈಡ್ ಮಾಡಿಕೊಂಡ ವಿದ್ಯಾರ್ಥಿ!

For Dai;y Updates Join Our whatsapp Group

Spread the love

ಹಾಸನ:- ಕರ್ನಾಟಕದಲ್ಲಿ ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಿದೆ. ರಿಸಲ್ಟ್ ಬಂದ ಬೆನ್ನಲ್ಲೇ ಇಲ್ಲೋರ್ವ ವಿದ್ಯಾರ್ಥಿ 1st ಕ್ಲಾಸ್ ಬಂದ್ರೂ ಕೂಡ ಸೂಸೈಡ್ ಮಾಡಿಕೊಂಡಿದ್ದಾನೆ. ಜಿಲ್ಲೆಯ ಅರಸೀಕೆರೆ ನಗರದಲ್ಲಿ ಈ ಘಟನೆ ಜರುಗಿದೆ.

ಶಿಕ್ಷಕ ಪ್ರಕಾಶ್ ಅವರ ಪುತ್ರ 18 ವರ್ಷದ ಮನೋಜ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಫಲಿತಾಂಶ ನೋಡಿ ಬಂದ ಮನೋಜ್ ನಿನ್ನೆ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಮನೋಜ್​ ಅರಸೀಕೆರೆ ನಗರದ ಅನಂತ ಪಿಯು ಕಾಲೇಜಿನಲ್ಲಿ ಪಿಸಿಎಂಬಿ ಸೈನ್ಸ್ ವಿಭಾಗದಲ್ಲಿ ಅಭ್ಯಾಸ ಮಾಡುತ್ತಿದ್ದ​. ನಿನ್ನೆ ಪ್ರಕಟವಾದ ಪಿಯು ಫಲಿತಾಂಶದಲ್ಲಿ ಶೇಕಡಾ 79 ಅಂಕ ಬಂದಿತ್ತು. ಕನ್ನಡ-98, ಇಂಗ್ಲೀಷ್- 85, ಫಿಸಿಕ್ಸ್-71, ಕೆಮಿಸ್ಟ್ರಿ- 74, ಮ್ಯಾಥ್ಸ್- 82 ಮತ್ತು ಬಯಾಲಜಿ-64 ಒಟ್ಟು-474 ಅಂಕ ಪಡೆದುಕೊಂಡಿದ್ದ. ಫಲಿತಾಂಶ ನೋಡಿ ಬಂದ ಮನೋಜ್​ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಡಿಮೆ ಅಂಕ ಬಂದಿದೆ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!