ಚೆಕ್‌ ಬೌನ್ಸ್‌ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರಿಗೆ ಶಿಕ್ಷೆ ಪ್ರಕಟ, 1 ಕೋಟಿ 25 ಲಕ್ಷ ದಂಡ!

0
Spread the love

ಬೆಂಗಳೂರು:- ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ ಎದುರಾಗಿದ್ದು, ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ನಗರದ 42ನೇ ಎಸಿಜೆಎಂ ಕೋರ್ಟ್‌ ಶಿಕ್ಷೆ ಪ್ರಕಟಿಸಿದೆ.

Advertisement

ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ 1.25 ಕೋಟಿ ದಂಡ ಪಾವತಿಸುವಂತೆ ನ್ಯಾಯಾಲಯದ ಜಡ್ಜ್‌ ಕೆ.ಎನ್.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸದಿದ್ದರೆ 1 ವರ್ಷ ಸೆರೆವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಘಟನೆ ವಿವರ:-

ದೂರುದಾರ ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಅನಿಲ್ ರಾಜಶೇಖರ್ ಚುಂಡೂರು ಭಾಸ್ಕರ್ ಪಾಲುದಾರಿಕೆಯ ಬಿ.ಸಿ. ಇನ್ಫ್ರಾಸ್ಟ್ರಕ್ಚರ್ ಅಂಡ್ ರಿಸೋರ್ಸ್ ಕಂಪನಿ ನಡುವೆ 2013 ರಿಂದಲೂ ಹಣಕಾಸು ವಿವಾದವಿತ್ತು. ವಿಎಸ್‌ಎಲ್ ಕಂಪೆನಿ ಪರವಾಗಿ ಕೋರ್ಟ್ ಆದೇಶ ನೀಡಿದ್ದು, ಬಿ. ನಾಗೇಂದ್ರ ಪಾಲುದಾರಿಕೆಯ ಕಂಪೆನಿ ಒಟ್ಟು 2 ಕೋಟಿ 53 ಲಕ್ಷ ಪಾವತಿಸಬೇಕಿತ್ತು. ಇದರ ಭಾಗವಾಗಿ 1 ಕೋಟಿ ರೂಪಾಯಿಯ ಚೆಕ್ ಅನ್ನು ನೀಡಲಾಗಿತ್ತು.

ಆದರೆ, 2022 ರಲ್ಲಿ ಚೆಕ್ ಬೌನ್ಸ್ ಆದ ಹಿನ್ನಲೆಯಲ್ಲಿ ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್ ಕೇಸ್ ದಾಖಲಿಸಿತ್ತು. ಸಾಕ್ಷ್ಯ ವಿಚಾರಣೆ ಬಳಿಕ ಕೋರ್ಟ್ ತೀರ್ಪು ನೀಡಿದ್ದು, 1 ಕೋಟಿ 23 ಲಕ್ಷ ದಂಡ ಪಾವತಿಸುವಂತೆ ಆದೇಶ ನೀಡಿದೆ. ಇದರಲ್ಲಿ 10 ಸಾವಿರ ಸರ್ಕಾರಕ್ಕೆ ಉಳಿದ ಹಣ ದೂರುದಾರ ಕಂಪೆನಿಗೆ ಪಾವತಿಸುವಂತೆ ಕೋರ್ಟ್ ಆದೇಶ ನೀಡಿದೆ.


Spread the love

LEAVE A REPLY

Please enter your comment!
Please enter your name here