ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮಂಗಳವಾರ ಶಿರಹಟ್ಟಿಯ ರೇಷ್ಮೆ ಇಲಾಖೆ ಕಚೇರಿ ಎದುರುಗಡೆ ರೇಷ್ಮೆ ಬೆಳೆಗಾರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿದ್ದರು.
Advertisement
ಬುಧವಾರ ಪ್ರತಿಭಟನಾ ಸ್ಥಳಕ್ಕೆ ತಹಸೀಲ್ದಾರ ಅನಿಲ ಬಡಿಗೇರ, ಸಿಪಿಐ ನಾಗರಾಜ ಮಾಡಳ್ಳಿ, ಪಿಎಸ್‌ಐ ಚನ್ನಯ್ಯ ದೇವೂರ ರೈತರ ಬೇಡಿಕೆಗಳ ಈಡೇರಿಕೆಗಾಗಿ ಸಂಬಂಧಿಸಿದ ಮೇಲಧಿಕಾರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸ್ಥಳಕ್ಕೆ ಆಗಮಿಸುವಂತೆ ಸೂಚಿಸಿದರು. ತರುವಾಯ ಸ್ಥಳಕ್ಕೆ ಇಲಾಖೆಯ ಉಪನಿರ್ದೆಶಕರು ಭೇಟಿ ನೀಡಿ ರೈತರ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದ ರೈತರು ಪ್ರತಿಭಟನೆಯನ್ನು ಅಂತ್ಯಗೊಳಿಸಿದರು.