ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಗುತ್ತಿಗೆದಾರರ ಸಂಘ ಪತ್ರ ಬರೆದು ಗುತ್ತಿಗೆ ಹಣ ಬಿಡುಗಡೆಗೆ ಕಾಣದ ಕೈಗಳು, ಮಧ್ಯವರ್ತಿಗಳ ಕಾಟ ಹೆಚ್ಚಾಗಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಪತ್ರದಲ್ಲಿ ಏನಿದೆ?
ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಧ್ಯವರ್ತಿಗಳು ಕಾಟ ಕೊಡುತ್ತಿದ್ದಾರೆ. ಜೇಷ್ಠತೆ ಪಾಲಿಸದೇ ಸ್ಪೆಷಲ್ ಎಲ್‌ಓಸಿ ಸೃಷ್ಟಿ ಮಾಡಿ ಹಣ ಬಿಡುಗಡೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ, ಲೋಕೋಪಯೋಗಿ ಇಲಾಖೆ, ನಾಲ್ಕು ನೀರಾವರಿ ನಿಗಮ ಮತ್ತು ಸಣ್ಣ ನೀರಾವರಿ ಇಲಾಖೆಯಲ್ಲಿ ಕಾಣದ ಕೈಗಳ ಬಗ್ಗೆ ಚರ್ಚೆ ಮಾಡಿ ಸಣ್ಣ ಗುತ್ತಿಗೆದಾರರಿಗೆ ನ್ಯಾಯ ಒದಗಿಸುವಂತೆ ಪತ್ರ ಬರೆದಿದೆ.
ಈ ಬಗ್ಗೆ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಲೋಕೋಪಯೋಗಿ ಇಲಾಖೆಯಲ್ಲಿ ಸತೀಶ್ ಜಾರಕಿಹೊಳಿ ಕುಟುಂಬಸ್ಥರು, ನೀರಾವರಿ ಇಲಾಖೆಯಲ್ಲಿ ಬೋಸರಾಜ್ ಮಗ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.