ಯಾದಗಿರಿ:- ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿರುವ ಘಟನೆ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ. ಬೊಲೆರೋ ಹಾಗೂ ಸಾರಿಗೆ ಬಸ್ ನಡುವೆ ನಡೆದ ಅಪಘಾತದಲ್ಲಿ ಈ ದುರಂತ ಸಂಭವಿಸಿದೆ.
Advertisement
ಬೊಲೆರೋ ಚಾಲಕ 30 ವರ್ಷದ ಶರಣಪ್ಪ, 19 ವರ್ಷದ ಸುನೀತಾ, 50 ವರ್ಷದ ಸೋಮವ್ವ ಮತ್ತು 55 ವರ್ಷದ ತಂಗಮ್ಮ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಬೊಲೆರೋ ವಾಹನದಲ್ಲಿ ಕುಟುಂಬಸ್ಥರು ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬೊಲೆರೋ ವಾಹನದಲ್ಲಿ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.