Home Karnataka News ಜಾತಿ ಗಣತಿ ವರದಿ ಜಾರಿ ಬಗ್ಗೆ ಚರ್ಚಿಸಲು ಏ.17ಕ್ಕೆ ವಿಶೇಷ ಸಚಿವ ಸಂಪುಟ ಸಭೆ!

ಜಾತಿ ಗಣತಿ ವರದಿ ಜಾರಿ ಬಗ್ಗೆ ಚರ್ಚಿಸಲು ಏ.17ಕ್ಕೆ ವಿಶೇಷ ಸಚಿವ ಸಂಪುಟ ಸಭೆ!

0
ಜಾತಿ ಗಣತಿ ವರದಿ ಜಾರಿ ಬಗ್ಗೆ ಚರ್ಚಿಸಲು ಏ.17ಕ್ಕೆ ವಿಶೇಷ ಸಚಿವ ಸಂಪುಟ ಸಭೆ!
Spread the love

ಬೆಂಗಳೂರು: ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಜಾತಿ ಗಣತಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ನಿರ್ಧಾರ ಮಾಡಲಾಗಿದ್ದು, ಕಳೆದ ವರ್ಷ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್‌ ಹೆಗ್ಡೆ ಸಲ್ಲಿಸಿದ್ದ ದತ್ತಾಂಶ ಅಧ್ಯಯನ ವರದಿ-2024 ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದರು. ಇಂದು ಸಂಪುಟ ಸಭೆಯಲ್ಲಿ ವರದಿ ಮಂಡನೆ ಮಾಡಲಾಯಿತು.

ವರದಿ ಬಗ್ಗೆ ಸಚಿವರು ಚರ್ಚೆಯನ್ನು ನಡೆಸಿದ್ದಾರೆ. ಕೆಲವು ಸಚಿವರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ಆದರೆ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಸುದೀರ್ಘ ಚರ್ಚೆಗಳು ನಡೆದಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ವರದಿಯ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲು ಸಂಪುಟ ನಿರ್ಧಾರ ಮಾಡಿದೆ.

ಇಂದಿನ ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ವಿಚಾರವಾಗಿ ಸ್ಪಷ್ಟ ತೀರ್ಮಾನ ಕೈಗೊಳ್ಳದೇ ಇದ್ದರೂ ಏಪ್ರಿಲ್ 17 ರಂದು ವಿಶೇಷ ಸಂಪುಟ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಈ ವಿಶೇಷ ಕ್ಯಾಬಿನೆಟ್ ನಲ್ಲಿ ಜಾತಿ ಗಣತಿ ವಿಚಾರವಾಗಿ ಸ್ಪಷ್ಟ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.


Spread the love

LEAVE A REPLY

Please enter your comment!
Please enter your name here