2025ರ ಐಪಿಎಲ್ ಸೀಸನ್ ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ ಯಾಕೋ ಸೋಲಿನ ಸರಣಿಯನ್ನೇ ಹೊತ್ತು ತಂದಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ ಸಿಎಸ್ಕೆ ತಂಡ ಗೆದ್ದಿರುವುದು ಕೇವಲ ಒಂದು ಮ್ಯಾಚ್ನಲ್ಲಿ ಮಾತ್ರ. ಇನ್ನುಳಿದ ಐದು ಪಂದ್ಯಗಳಲ್ಲೂ ಮುಗ್ಗರಿಸಿದೆ.
ಈ ಸೋಲುಗಳ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ಗೆ ಪ್ರವೇಶಿಸಬಹುದು. ಏಕೆಂದರೆ ಸಿಎಸ್ಕೆ ತಂಡಕ್ಕೆ ಇನ್ನೂ 8 ಪಂದ್ಯಗಳಿವೆ. ಈ ಪಂದ್ಯಗಳ ಮೂಲಕ 16 ಅಂಕಗಳನ್ನು ಪಡೆದರೆ ಆ ತಂಡ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ 7 ಪಂದ್ಯಗಳಲ್ಲಿ 7 ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಬಹುದು.
ಇನ್ನು ಮುಂದಿನ 8 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೂರು ಪಂದ್ಯಗಳಲ್ಲಿ ಸೋಲುಂಡರೆ ಪ್ಲೇಆಫ್ ಹಾದಿ ಕಠಿಣವಾಗಲಿದೆ. ಏಕೆಂದರೆ ಎಂಟರಲ್ಲಿ 5 ಜಯ ಮಾತ್ರ ಸಾಧಿಸಿದರೆ, ಸಿಎಸ್ಕೆ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ. ಈ ವೇಳೆ ನೆಟ್ ರನ್ ರೇಟ್ ಲೆಕ್ಕಾಚಾರಗಳು ಕೂಡ ಗಣನೆಗೆ ಬರುವ ಸಾಧ್ಯತೆ ಹೆಚ್ಚು.
ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಬೇಕಿದ್ದರೆ, ಮುಂದಿನ 8 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಲೇಬೇಕು. ಇನ್ನು ಮುಂದಿನ 6 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದರೂ 14 ಅಂಕಗಳೊಂದಿಗೆ ಪ್ಲೇಆಫ್ಗೆ ಪ್ರವೇಶಿಸಲು ಅವಕಾಶ ಸಿಗಬಹುದು. ಆದರೆ ಅದು ಟಾಪ್-4 ನಲ್ಲಿರುವ ಒಂದು ತಂಡವು 14 ಅಂಕಗಳನ್ನು ಪಡೆದಿದ್ದರೆ ಮಾತ್ರ ಈ ಅವಕಾಶ ಸಿಗಲಿದೆ.