“ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ”: ರಾಜ್ಯ ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿದವರ ಮೇಲೆ FIR!

0
Spread the love

ಬೆಂಗಳೂರು:- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಜನಕ್ರೋಶ ಅಭಿಯಾನ ನಡೆಸುತ್ತಿರುವ ವೇಳೆಯೇ, ಅದರ ಮಿತ್ರ ಪಕ್ಷ ಜೆಡಿಎಸ್ ಬುಧವಾರ ‘ಸಾಕಪ್ಪ ಸಾಕು, ಕಾಂಗ್ರೆಸ್ ಸರ್ಕಾರ’ ಅಭಿಯಾನ ಆರಂಭಿಸಿತ್ತು.

Advertisement

ಇದೀಗ “ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ” ಎಂದು ರಾಜ್ಯ ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿದವರ ಮೇಲೆ FIR ದಾಖಲಾಗಿದೆ. ಕಳೆದ ಮೂರು ದಿನದ ಹಿಂದೆ ಜೆಡಿಎಸ್ ಪಕ್ಷದಿಂದ ಸರ್ಕಾರದ ವಿರುದ್ಧ “ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ” ಎಂಬ ಹೆಸರಿನಲ್ಲಿ ಪೋಸ್ಟ್‌ ಅಂಟಿಸಿ ಸರ್ಕಾರವನ್ನು ಟೀಕಿಸಲಾಗಿತ್ತು. ನಗರದ ಮಹಾರಾಣಿ ಕಾಲೇಜು ಬಸ್ ನಿಲ್ದಾಣ, ಕೆ.ಆರ್ ಸರ್ಕಲ್ ಸೇರಿ ವಿವಿಧ ಕಡೆ ಪೋಸ್ಟರ್ ಅಂಟಿಸಿ, ಕ್ಯೂ ಆರ್ ಕೋಡ್ ಸ್ಕ್ಯಾನ್ ಅಳವಡಿಕೆ ಮಾಡಲಾಗಿತ್ತು.

ಯಾವುದೇ ಅನುಮತಿ ಪಡೆಯದೇ ಪೋಸ್ಟರ್‌ಗಳನ್ನು ಅಂಟಿಸಿದ್ದ ಹಿನ್ನೆಲೆಯಲ್ಲಿ ಹಲಸೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here