ಬೆಂಗಳೂರು:- ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಹೆಚ್ಚಾಗುತ್ತಿವೆ. ಅಲ್ಲದೇ ಎಲ್ಲಾ ನೌಕರರೂ ಚರಾಸ್ತಿ-ಸ್ಥಿರಾಸ್ತಿಗಳನ್ನು ವೆಬ್‌ಸೈಟ್‌ನಲ್ಲಿ ಘೋಷಿಸಬೇಕು ಎಂದು ಲೋಕಾಯುಕ್ತಯೂ ಹೇಳಿತ್ತು. ಈ ಹೊತ್ತಲ್ಲಿ ರಾಜ್ಯ ಸರ್ಕಾರ ಪ್ರತಿ ವರ್ಷ ಸರ್ಕಾರಿ ನೌಕರರ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ ಎಂಬ ಮಹತ್ವದ ಆದೇಶ ಹೊರಡಿಸಿದೆ.
ಪ್ರತಿಯೊಬ್ಬ ಸರ್ಕಾರಿ ನೌಕರರು ಸರ್ಕಾರಿ ಸೇವೆಗೆ ಸೇರುವಾಗ ಹಾಗೂ ಪ್ರತಿ ವರ್ಷ ನೌಕರರ ಹಾಗೂ ಕುಟುಂಬದ ಆಸ್ತಿ ವಿವರ ಸಲ್ಲಿಸೋದು ಈಗಾಗಲೇ ಕಡ್ಡಾಯವಾಗಿದೆ. ಅದರಂತೆ ಲೋಕಾಯಕ್ತದವರು ಯಾವ ಅಧಿಕಾರಿಗಳ ಬಗ್ಗೆ ಆಸ್ತಿ ವಿವರ ಕೇಳುತ್ತಾರೋ ವಿಳಂಬವಿಲ್ಲದೇ ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸೂಚನೆಗಳನ್ನು ಪಾಲಿಸದಿದ್ದರೆ ಇಲಾಖಾ ಮುಖ್ಯಸ್ಥರು ಹಾಗೂ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತೆ ಅಂತಾ ಸರ್ಕಾರ ಎಚ್ಚರಿಕೆ ನೀಡಿದೆ. ಇನ್ನೂ ಇದಕ್ಕೆ ಸರ್ಕಾರಿ ನೌಕರರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.


