HomeKarnataka Newsಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ: ಡಾ. ಜಿ ಪರಮೇಶ್ವರ್‌

ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ: ಡಾ. ಜಿ ಪರಮೇಶ್ವರ್‌

For Dai;y Updates Join Our whatsapp Group

ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ. ನಗರದಲ್ಲಿ ಹುಬ್ಬಳ್ಳಿಯಲ್ಲಿ ಬಾಲಕಿಯ ಹತ್ಯೆ ಹಾಗೂ ಎನ್​ಕೌಂಟರ್ ವಿಚಾರವಾಗಿ ಮಾತನಾಡಿದ ಅವರು,

ಬೆಂಗಳೂರಿಗೆ ಹೊರರಾಜ್ಯಗಳಿಂದ ಸಾಕಷ್ಟು ಜನ ಬರುತ್ತಾರೆ. ಹೀಗೆ ಹೊರಗಿನಿಂದ ಬಂದವರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲ್ಲ. ಇಲ್ಲಿನ ಜನರ ಭಾವನೆ ಅರ್ಥ ಮಾಡಿಕೊಳ್ಳದೆ ಈ ರೀತಿ ವರ್ತಿಸುತ್ತಾರೆ ಎಂದು ಹೇಳಿದ್ದಾರೆ.

ಹೊರರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ. ಹೆಚ್ಚು ಕಡೆಗಳಲ್ಲಿ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುವುದು ಕಂಡುಬರುತ್ತಿದೆ. ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಸಭೆ ನಡೆಸುತ್ತೇವೆ. ಕಾರ್ಮಿಕ ಇಲಾಖೆ ಜೊತೆ ನಾವು ಜಂಟಿಯಾಗಿ ಸಭೆ ನಡೆಸುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img