ನಾಳೆಯಿಂದ CET ಪರೀಕ್ಷೆ: ವಿದ್ಯಾರ್ಥಿಗಳ ಡ್ರೆಸ್‌ಕೋಡ್ ಹೀಗಿರಲಿ- ರೂಲ್ಸ್ ಏನಿದೆ?

0
Spread the love

ಬೆಂಗಳೂರು:- ಕರ್ನಾಟಕದಲ್ಲಿ ನಾಳೆಯಿಂದ ಸಿಇಟಿ ಪರೀಕ್ಷೆ ಪ್ರಾರಂಭವಾಗಲಿದೆ. ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡ್ರೆಸ್‌ಕೋಡ್ ಬಿಡುಗಡೆ ಮಾಡಿದೆ. ಅದರಂತೆ ವಿದ್ಯಾರ್ಥಿಗಳು ಡ್ರೆಸ್ ಧರಿಸಿರಬೇಕು.

Advertisement

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯು, ಎ.15, ಎ.16 ಮತ್ತು ಎ.17 ರಂದು ರಾಜ್ಯದ 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಗೆ 3.31 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಇನ್ನೂ ವಿದ್ಯಾರ್ಥಿಗಳು ಕಡ್ಡಾಯವಾಗಿ, ಡ್ರೆಸ್‌ಕೋಡ್ ಪಾಲನೆ ಮಾಡುವಂತೆ ಕೆಇಎ ಖಡಕ್ ಸೂಚನೆ ನೀಡಿದೆ. ಹಾಗಿದ್ರೆ ಡ್ರೆಸ್ ಕೋಡ್‌ನಲ್ಲೇನಿದೆ? ನೋಡೋದಾದರೆ…

* ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ವಸ್ತ್ರ ಸಂಹಿತೆ.

* ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು.

* ಸಾಧ್ಯವಾದಷ್ಟು ಕಾಲರ್ ಇಲ್ಲದಿರುವುದನ್ನು ಹಾಕಿಕೊಂಡು ಬಂದರೆ ಉತ್ತಮ.

* ಪುರುಷರು, ಜೇಬು ಇಲ್ಲದ/ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು.

* ಕುರ್ತಾ ಪೈಜಾಮ/ಜೀನ್ಸ್ ಪ್ಯಾಂಟ್‌ಗೆ ಅವಕಾಶ ಇಲ್ಲ.

* ಶೂ ಕೂಡ ನಿಷೇಧ.

* ಮೊಬೈಲ್, ಪೆನ್‌ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇಧ.

ಸಿಇಟಿ ಎಕ್ಸಾಂ ರೂಲ್ಸ್:

* ವೆಬ್ ಕಾಸ್ಟಿಂಗ್ ಮೂಲಕ ಎಲ್ಲ 775 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡುವ ವ್ಯವಸ್ಥೆ.

* ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ.

* ಪರೀಕ್ಷೆಗೆ ಒಂದೂವರೆ ಗಂಟೆ ಮುಂಚೆ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಹಾಜರಾಗಬೇಕು.

* ಪೊಲೀಸ್/ ಗೃಹ ರಕ್ಷಕ ದಳದ ಸಿಬ್ಬಂದಿ ಅಭ್ಯರ್ಥಿಗಳ ತಪಾಸಣೆ ಬಳಿಕವೇ ಪರೀಕ್ಷಾ ಕೇಂದ್ರಕ್ಕೆ ತೆರಳಲು ಅವಕಾಶ.

* ಕನಿಷ್ಠ ಒಂದೂವರೆ ಗಂಟೆ ಮುಂಚೆಯೇ ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಬಂದು ತಪಾಸಣೆಗೆ ಒಳಗಾಗಬೇಕು.

* ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ.

* ಯಾರದ್ದೋ ಪರೀಕ್ಷೆಯನ್ನು ಇನ್ಯಾರೋ ಬರೆಯುವುದನ್ನು ತಡೆಯುವ ಸಲುವಾಗಿ ಈ ವ್ಯವಸ್ಥೆ ಜಾರಿ ಮಾಡಲಾಗಿದೆ.

.


Spread the love

LEAVE A REPLY

Please enter your comment!
Please enter your name here