ಬೆಳಗಾವಿ:- ಬೆಳಗಾವಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಳಿ ತಪ್ಪಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿರುವ ಘಟನೆ ಜರುಗಿದೆ.
Advertisement
ರೈಲು ನಿಲ್ದಾಣದಿಂದ ಅರ್ಧ ಕಿಮೀ ದೂರದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದೆ. ಈ ರೈಲು, ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿತ್ತು. ಈ ವೇಳೆ ಹಳಿ ತಪ್ಪಿ ಮೂರು ಬೋಗಿಗಳು ಪಕ್ಕಕ್ಕೆ ಸರಿದಿವೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ರೈಲ್ವೇ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೋಗಿಗಳು ಹಳಿ ತಪ್ಪಲು ಕಾರಣ ಏನು ಎಂದು ಮಾಹಿತಿ ಕಲೆ ಹಾಕಲಾಗುತ್ತಿದೆ.