ಬೆಳಗಾವಿ:- ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಕಿರಿಕ್ ನಡೆದಿದ್ದು, ಅಂಬೇಡ್ಕರ್ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವಕರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಜರುಗಿದೆ.
ಹಲ್ಲೆಯಿಂದ ಉಮೇಶ್ ಲಮಾಣಿ, ಶಿವರಾಜ್ ಕರಿಗಾರ ಎಂಬುವವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಬೇಡ್ಕರ್ ಜಯಂತಿ ಪ್ರಯುಕ್ತ ನಡೆಯುತ್ತಿದ್ದ ಮೆರವಣಿಗೆಯಲ್ಲಿ ಏಕಾಏಕಿ ಬಂದ ಕಿಡಿಗೇಡಿಗಳ ಗುಂಪು, ಡ್ಯಾನ್ಸ್ ಮಾಡ್ತಿದ್ದವರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದೆ.
ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು, ಪುಂಡರಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.



