HomeGadag Newsಕೇಂದ್ರ, ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಸ್ಲಂ ಸಮಿತಿಯಿಂದ ಪ್ರತಿಭಟನೆ

ಕೇಂದ್ರ, ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಸ್ಲಂ ಸಮಿತಿಯಿಂದ ಪ್ರತಿಭಟನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದರಿಂದ ಬಡ ಮತ್ತು ಮಧ್ಯಮ ವರ್ಗದ ಜನರು ಹೈರಾಣಾಗಿದ್ದಾರೆ. ರಾಜ್ಯದಲ್ಲಿ ನಿರಂತರ ಗಗನಕ್ಕೇರುತ್ತಿರುವ ದಿನ ಬಳಕೆ ವಸ್ತುಗಳಿಂದ ಜನರ ಜೀವನವನ್ನು ಮತ್ತಷ್ಟು ಹಾಳು ಮಾಡುತ್ತಿವೆ. ಕೂಡಲೇ ಸರ್ಕಾಗಳು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಸ್ಲಂ ಜನಾಂದೋಲನ-ಕರ್ನಾಟಕ ರಾಜ್ಯ ಸಮಿತಿಯ ಕರೆಯ ಮೇರೆಗೆ ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಜನರಿಂದ ಮಿತಿಮೀರಿ ತೆರಿಗೆ ವಸೂಲಿ ಮಾಡುವ ಮೂಲಕ ಜನರನ್ನು ಸುಲಿಗೆ ಮಾಡಲು ಹೊರಟಿದೆ. ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಆರ್ಥಿಕ ನೀತಿಯಿಂದ ಆರ್ಥಿಕ ವ್ಯವಸ್ಥೆ ನಿಯಂತ್ರಣ ತಪ್ಪಿದೆ. ಜನರ ಕಲ್ಯಾಣಕ್ಕಿಂತ ತಮ್ಮ ಆರ್ಥಿಕ ಹಿತಾಸಕ್ತಿಗಳಿಗೆ ಆದ್ಯತೆ ನೀಡುತ್ತಿರುವುದು ಖಂಡನೀಯ. ರಾಜ್ಯ ಸರ್ಕಾರದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರಿಂದ ಪಂಚ ಗ್ಯಾರಂಟಿ ಯೋಜನೆ ಮಹತ್ವ ಕಳೆದುಕೊಳ್ಳುತ್ತಿದೆ. ಇವರಿಗೆ ಜನರಿಗೆ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ, ಪರವೀನಬಾನು ಹವಾಲ್ದಾರ, ಮೆಹರುನಿಸಾ ಡಂಬಳ, ಇಬ್ರಾಹಿಂ ಮುಲ್ಲಾ, ಮೆಹಬೂಬಸಾಬ ಬಳ್ಳಾರಿ, ಸಾಕ್ರುಬಾಯಿ ಗೋಸಾವಿ, ಸಂಕ್ರಪ್ಪ ಮೂಲಿಮನಿ, ಮುನ್ನಾ ಅಗಡಿ, ಮೈಮುನ ಬೈರಕದಾರ, ಮಕ್ತುಮಸಾಬ ಮುಲ್ಲಾನವರ, ದಾದು ಗೋಸಾವಿ, ಬಾಷಾಸಾಬ ಡಂಬಳ, ಮೌಲಾಸಾಬ ಗಚ್ಚಿ, ಖಾಜಾಸಾಬ ಬಳ್ಳಾರಿ, ಮುತ್ತಣ್ಣ ಅಣ್ಣಿಗೇರಿ, ರಾಮಪ್ಪ ಕೊಪ್ಪಳ, ಕಾಶೀಮಸಾಬ ಬೈರಕದಾರ ಹಾಗೂ ಗದಗ-ಬೆಟಗೇರಿ ನಗರದ ಸ್ಲಂ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬೆಲೆ ಏರಿಕೆಯಿಂದ ಸರ್ಕಾರಗಳು ಬಡವರು ಮತ್ತು ಮಧ್ಯಮ ವರ್ಗದವರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ. ಇಂತಹ ಜನವಿರೋಧಿ ನೀತಿಗಳನ್ನು ಕೈಬಿಟ್ಟು ಜನಪರವಾದ ಯೋಜನೆಗಳು ಜಾರಿಗೆ ತರಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!