ಕಾಂಗ್ರೆಸ್ ಸರ್ಕಾರದ ಹೀನ ಮನಸ್ಥಿತಿಯ ಮುಖವಾಡವನ್ನು ಪ್ರದರ್ಶಿಸಿದೆ: ಬಿವೈ ವಿಜಯೇಂದ್ರ ಕಿಡಿ

0
Spread the love

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಹೀನ ಮನಸ್ಥಿತಿಯ ಮುಖವಾಡವನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ನಗರದಲ್ಲಿ , ಶಿವಮೊಗ್ಗ ಮತ್ತು ಬೀದರ್​ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ ತೆಗೆದುಹಾಕುವಂತೆ ಸೂಚಿಸಿರುವ ವಿಚಾರವಾಗಿ ಮಾತನಾಡಿದ ಅವರು,

Advertisement

ಬೀದರ್‌ನಲ್ಲೂ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಟ್ಟಿಲ್ಲ. ಮತ್ತೊಂದೆಡೆ, ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕಿತ್ತೆಸೆದು ದರ್ಪ ಮೆರೆದಿದ್ದಾರೆ. ಆ ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿದ ಅಧಿಕಾರಿ, ಸಿಬ್ಬಂದಿಗಳ ವರ್ತನೆ ಅತ್ಯಂತ ಹೇಯ.

ಈ ರೀತಿಯ ಬೌದ್ಧಿಕ ವಿಕೃತಿ ಹಾಗೂ ಮನುಷ್ಯತ್ವ ಇಲ್ಲದ ನಡೆ ಇನ್ನೊಂದಿರಲಾರದು. ಇದು ಕಾಂಗ್ರೆಸ್ ಸರ್ಕಾರದ ಹೀನ ಮನಸ್ಥಿತಿಯ ಮುಖವಾಡವನ್ನು ಪ್ರದರ್ಶಿಸಿದೆ ಎಂದು ವಾಗ್ಧಾಳಿ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here