ರಸ್ತೆ ಅಪಘಾತ: ಬೈಕ್ ಗೆ ಡಿಕ್ಕಿ ಹೊಡೆದ ಟಿಪ್ಪರ್- ಅಡುಗೆ ಭಟ್ಟ SPOT DEATH!

0
Spread the love

ಚಾಮರಾಜನಗರ:- ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಅಡುಗೆ ಭಟ್ಟ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಕಾಳನಹುಂಡಿ ಗೇಟ್ ಬಳಿ ಜರುಗಿದೆ.

Advertisement

ಅಡುಗೆಭಟ್ಟನಾಗಿ ಕೆಲಸ ಮಾಡುತ್ತಿದ್ದ 45 ವರ್ಷದ ಮಲ್ಲೇಶ್ ಮೃತ ವ್ಯಕ್ತಿ. ಇವರು, ಚಾಮರಾಜನಗರದ ಕಲ್ಯಾಣ ಮಂಟಪದಲ್ಲಿ ಅಡುಗೆ ಕೆಲಸವನ್ನು ಮುಗಿಸಿಕೊಂಡು ಸ್ವಗ್ರಾಮಕ್ಕೆ ವಾಪಸ್ಸು ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಚಾಮರಾಜನಗರ ಗ್ರಾಮಾಂತರ ಪೊಲೀಸರು, ಮೃತ ದೇಹವನ್ನು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here