HomeGadag Newsಲಸಿಕಾ ಅಭಿಯಾನ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ಲಸಿಕಾ ಅಭಿಯಾನ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಎಪ್ರಿಲ್ 21ರಿಂದ ಜೂನ್ 4ರವರೆಗೆ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಅಭಿಯಾನದ ಯಶಸ್ಸಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯೊಂದಿಗೆ ವಿವಿಧ ಇಲಾಖೆಯ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 7ನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಎಚ್. ನಾಗರಾಜ ಮಾತನಾಡಿ, ಕಾಲುಬಾಯಿ ರೋಗವು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದೆ. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗದಗ ಜಿಲ್ಲೆಗೆ ಕಾಲುಬಾಯಿ ರೋಗ ಲಸಿಕೆಯು ಕೇಂದ್ರ ಸರ್ಕಾರದಿಂದ ಸರಬರಾಜಾಗಿದ್ದು, ಈ ರೋಗದ ವಿರುದ್ಧ ದನ, ಎಮ್ಮೆ ಮತ್ತು ಕರುಗಳಿಗೆ ಉಚಿತವಾಗಿ ಎಪ್ರಿಲ್ 21ರಿಂದ ಜೂನ್ 4ರವರೆಗೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಲಸಿಕೆದಾರರು ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ಲಸಿಕಾ ಅಭಿಯಾನದಲ್ಲಿ 196 ಲಸಿಕಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಕೆಎಂಎಫ್, ನಗರಸಭೆ, ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಭೆಗೆ ವಿವರಿಸಿದರು.

ಇದೇ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಕುರಿತು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು, ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಜಾನುವಾರು ರೋಗಗಳ ಲಸಿಕಾ ನಿರ್ವಹಣಾ ಸಮಿತಿ ಸದಸ್ಯರು ಹಾಜರಿದ್ದರು.

ಜಾನುವಾರುಗಳು ದೇಶದ ಆಸ್ತಿಯಾಗಿದ್ದು, ಜಾನುವಾರುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ. ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸಿ ನಿರ್ಮೂಲನೆ ಮಾಡಲು ಈ ರೋಗದ ವಿರುದ್ಧ ಜಾನುವಾರುಗಳಿಗೆ ಲಸಿಕೆ ಹಾಕಿಸುವುದು ಕಡ್ಡಾಯವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಶುಪಾಲಕರು ಹಾಗೂ ರೈತ ಬಾಂಧವರು ತಮ್ಮ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img