ಬೆಂಗಳೂರು:- ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪೇಗೌಡ ಏರ್ಪೋರ್ಟ್ ಮಂಡಳಿ ಸ್ಪಷ್ಟನೆ ಕೊಟ್ಟಿದೆ.
ಘಟನೆ ಬಗ್ಗೆ ಕೆಂಪೇಗೌಡ ಏರ್ಪೋರ್ಟ್ ಆಡಳಿತ ಮಂಡಳಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಏ.18ರ ಮಧ್ಯಾಹ್ನ 12.15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾಂಟ್ರ್ಯಾಕ್ಟ್ ಏಜೆನ್ಸಿ ಕಡೆಯ ಚಾಲಕ ಟಿಟಿ ವಾಹನವನ್ನು ಚಲಾಯಿಸಿಕೊಂಡು ಕೆಟ್ಟು ನಿಂತಿದ್ದ ವಿಮಾನದ ಬಳಿ ಬಂದಿದ್ದು, ಫ್ಲೈಟ್ಗೆ ಟಿಟಿ ವಾಹನದ ಮೇಲ್ಭಾಗ ತಗುಲಿ ಡ್ಯಾಮೇಜ್ ಆಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ತಕ್ಷಣ ನಮ್ಮ ಸಿಬ್ಬಂದಿ ಮುನ್ನೆಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಘಟನೆ ಕುರಿತು ಈಗಾಗಲೇ ಡಿಜಿಸಿಎಗೆ ಮಾಹಿತಿ ರವಾನಿಸಿದ್ದೇವೆ. ಪ್ರಯಾಣಿಕರಿಗೆ ಹಾಗೂ ವಿಮಾನಗಳ ಹಾರಾಟಕ್ಕೆ ಅಡಚಣೆಯಾಗಿಲ್ಲ. ಪ್ರಯಾಣಿಕರು, ಸಿಬ್ಬಂದಿ, ಏರ್ಲೈನ್ಸ್ನ ಸುರಕ್ಷತೆ ನಮ್ಮ ಆದ್ಯತೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.