HomeCrime NewsCrime News: ಮೂರು ತಿಂಗಳ ಹಿಂದೆ ಮದುವೆ ಆಗಿದ್ದ ಮಂಗಳಮುಖಿಯ ಬರ್ಬರ ಹತ್ಯೆ!

Crime News: ಮೂರು ತಿಂಗಳ ಹಿಂದೆ ಮದುವೆ ಆಗಿದ್ದ ಮಂಗಳಮುಖಿಯ ಬರ್ಬರ ಹತ್ಯೆ!

For Dai;y Updates Join Our whatsapp Group

ಬೆಂಗಳೂರು :- ಮೂರು ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಮಂಗಳಮುಖಿಯನ್ಮು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ನಡೆದಿರುವ ಘಟನೆ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್​​ನಲ್ಲಿ ನಡೆದಿದೆ.

ತನುಶ್ರೀ(40) ಮೃತ ದುರ್ದೈವಿ. ಮೂರು ತಿಂಗಳ ಹಿಂದೆ ಜಗನ್ನಾಥ್ ಎಂಬುವರ ಜೊತೆ ತನುಶ್ರೀ ವಿವಾಹವಾಗಿತ್ತು. ಮೂರು ದಿನಗಳ ಹಿಂದೆಯೇ ತನುಶ್ರೀಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಕೊಲೆ ತನುಶ್ರೀಯ ಪತಿ ಜಗನ್ನಾಥ್ ಮತ್ತು ಮನೆಗೆಲಸದಾಕೆ ಪರಾರಿಯಾಗಿದ್ದಾರೆ. ತನುಶ್ರೀ ಅವರು ಸಂಗಮ ಎಂಬ ಹೆಸರಿನ ಎನ್​ಜಿಒ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img