ಬೆಂಗಳೂರು:- ಪತ್ನಿಯಿಂದಲೇ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಭೀಕರ ಹತ್ಯೆ ನಡೆದಿರುವ ಘಟನೆ ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನಲ್ಲಿ ಜರುಗಿದೆ.
ಇಂದು ಮಧ್ಯಾಹ್ನದ ವೇಳೆ ಓಂ ಪ್ರಕಾಶ್ ಅವರು ತಮ್ಮ ಮನೆಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದರು. ಪರಿಶೀಲನೆ ಮಾಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಓಂ ಪ್ರಕಾಶ್ ಅವರನ್ನು ಸ್ವತಃ ಅವರ ಹೆಂಡತಿಯೇ ಕೊಲೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ.
ಘಟನೆ ತಿಳಿದ ಬೆನ್ನಲ್ಲೇ ಸ್ಥಳಕ್ಕೆ ತೆರಳಿದ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಪತ್ನಿಯೇ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.
ಇನ್ನೂ 1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು. ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.