ಹಾಸನ: ದ್ವಿಚಕ್ರ ವಾಹನ ಸವಾರ ಹೆಲ್ಮೆಟ್ ಧರಿಸದ ಕಾರಣ ಮೃತಪಟ್ಟಿದ್ದಾನೆ. ಹೌದು ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಹಾಸನ ಹೊರವಲಯದ ಬೂವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮುತ್ತತ್ತಿ ಗ್ರಾಮದ ಎಸ್.ಬಿ.ಎಂ. ಲೇಔಟ್ನ ನಿವಾಸಿ ಶರತ್(40) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಶರತ್ ಭಾನುವಾರ ರಾತ್ರಿ 11 ಗಂಟೆಯಲ್ಲಿ ಫುಡ್ ಡೆಲಿವರಿ ಮಾಡಲು ಹಾಸನ ನಗರದಿಂದ ಗೆಂಡೆಗಟ್ಟೆಗೆ ತೆರಳುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಗೆ ತಿರುವು ತೆಗೆದುಕೊಳ್ಳುತ್ತಿದ್ದಾಗ ಬೆಂಗಳೂರು ಕಡೆಯಿಂದ ಬಂದ ಮತ್ತೊಂದು ಬೈಕ್ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ಶರತ್ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶರತ್ ಹೆಲ್ಮೆಟ್ ಧರಿಸದ ಕಾರಣ ತಲೆಗೆ ಬಲವಾದ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿ ಶರತ್ ಸ್ಥಳದಲ್ಲೇ ಮೃತಪಟ್ಟದ್ದಾರೆ. ಮತ್ತೊಬ್ಬ ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.