ಕಲಬುರಗಿ:- ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಆಳಂದ ಪೋಲಿಸರು ಯಶಸ್ವಿಯಾಗಿದ್ದಾರೆ. ಬಾಲಚಂದ್ರ, ರಫೀಕ್, ನಿರ್ಸಾ ಬಂಧಿತರು.
Advertisement
ಆರೋಪಿಗಳಿಂದ 50 ಸಾವಿರ ರೂ. ಮೌಲ್ಯದ ಅರ್ಧ ಕೆ.ಜಿ ಗಾಂಜಾ & ಬೈಕ್ ಸೀಜ್ ಮಾಡಲಾಗಿದೆ. ಆರೋಪಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಇದರ ಖಚಿತ ಮಾಹಿತಿ ಪಡೆದ ಪೊಲೀಸರು, ಭರ್ಜರಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಿರುದ್ಧ ಆಳಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.