ನಿವೃತ್ತ ಐಪಿಎಸ್ ಹತ್ಯೆ ಕೇಸ್: ಪತ್ನಿಗೆ ಕಾಯಿಲೆ ಇತ್ತು ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ – ಜಿ.ಪರಮೇಶ್ವರ್

0
Spread the love

ಬೆಂಗಳೂರು: ನಿವೃತ್ತ ಐಪಿಎಸ್ ಓಂ ಪ್ರಕಾಶ್‌  ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿವೃತ್ತ ಡಿಜಿಪಿ ಓಂ ಪ್ರಕಾಶ್‌ ಹತ್ಯೆ ಪ್ರಕರಣ ತನಿಖೆ ನಡೆಸಲಾಗುತ್ತಿದೆ.

Advertisement

ತನಿಖೆಯಲ್ಲಿ ಏನೆಲ್ಲ ಮಾಹಿತಿ ಸಿಗುತ್ತದೆ ಎಂಬುದನ್ನು ನೋಡಬೇಕಿದೆ. 2025 ರಲ್ಲಿ ನಾನು ಗೃಹ ಸಚಿವನಾಗಿದ್ದ ವೇಳೆ ಓಂ ಪ್ರಕಾಶ್ ಅವರು ಡಿಜಿಪಿಯಾಗಿ ಕೆಲಸ ಮಾಡಿದ್ದರು. ಒಳ್ಳೆಯ ಅಧಿಕಾರಿ, ಒಳ್ಳೆಯ ವ್ಯಕ್ತಿ. ಈ ರೀತಿಯಾಗಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು. ಪ್ರಕರಣದ ತನಿಖೆಯಾಗುವವರೆಗೂ ಘಟನೆಗೆ ಇದೇ ಕಾರಣ ಎಂದು ಹೇಳಲು ಆಗುವುದಿಲ್ಲ.

ನಿರ್ದಿಷ್ಟವಾಗಿ ಹೇಳಲು ಬರುವುದಿಲ್ಲ. ಕೌಟುಂಬಿಕ ಕಾರಣದ ಬಗ್ಗೆ ಹಿಂದೆ ದೂರು ಕೊಟ್ಟಿರುವುದನ್ನು ತನಿಖೆಯಲ್ಲಿ ಪರಿಶೀಲಿಸುತ್ತಾರೆ ಎಂದರು. ಎಲ್ಲವನ್ನು ಸಮಗ್ರವಾಗಿ ತನಿಖೆ ಮಾಡುವವರೆಗೂ ಯಾವುದನ್ನು ಹೇಳಲು ಆಗುವುದಿಲ್ಲ‌. ಓಂ ಪ್ರಕಾಶ್ ಅವರ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪತ್ನಿಗೆ ಕಾಯಿಲೆ ಇತ್ತು ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ‌ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here