ಮುಂಬೈ:- ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ದಾಟುತ್ತಿದ್ದ ಮಹಿಳೆಗೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
ಮಹಿಳೆ ತಲೆಯ ಮೇಲೆ ಮಡಕೆಯನ್ನು ಇಟ್ಟುಕೊಂಡು ರಸ್ತೆ ದಾಟುತ್ತಿದ್ದಳು. ಈ ವೇಳೆ ಕಾರು ವೇಗವಾಗಿ ಬಂದು ಮಹಿಳೆಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ, ಕಾರಿಗಿಂತಲೂ ಎತ್ತರಕ್ಕೆ ಹಾರಿ, ರಸ್ತೆ ಮೇಲೆ ಬಿದ್ದಿದ್ದಾಳೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಪೈಥಾನ್ ತಾಲೂಕಿನ ಕತ್ಪುರ ನಿವಾಸಿ ಸಿಂಧುಬಾಯಿ ರಂಭಾವು ಗಲ್ಫಡೆ ಎಂದು ಗುರುತಿಸಲಾಗಿದೆ. ಮಹಿಳೆ ಜಯಕ್ವಾಡಿ ಮಾರುಕಟ್ಟೆಗೆ ತೆರಳಿ ವಾಪಸ್ ಆಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಅಪಘಾತದ ಬಳಿಕ ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಈ ಸಂಬಂಧ ಪೈಥಾನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


