ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಕೇಸ್ ಸದ್ಯ ಕರ್ನಾಟಕದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಓಂ ಪ್ರಕಾಶ್ ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
Advertisement
ಕೊಲೆ ಆರೋಪಿ ಪಲ್ಲವಿ ಅವರನ್ನು ಸೋಮವಾರ ನ್ಯಾಯಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಜರ್ಡ್ಜ್ ಜಿ.ಎ.ಲತಾದೇವಿ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.
ಮೇ 3ರ ವರೆಗೆ ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯ ಪಲ್ಲವಿಯನ್ನು ಬಂಧಿಸಿರುವ ಹೆಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು, ಕೋರ್ಟ್ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿರುವ ಪಲ್ಲವಿ ನ್ಯಾಯಾಂಗ ಬಂಧನದಲ್ಲಿದ್ದಾರೆ.