ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಸ್ಟುಡೆಂಟ್ಸ್ ಎಜ್ಯುಕೇಶನ್ ಸಂಸ್ಥೆಯ ಸನ್ಮಾರ್ಗ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (ಓಖಿಂ) ಜರುಗಿಸುವ ಪ್ರಸಕ್ತ ಶೈಕ್ಷಣಿಕ ಸಾಲಿನ ‘ಜೆ.ಇ.ಇ ಮೇನ್ಸ್’ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಸಂಸ್ಥೆಯ ಗೌರವವನ್ನು ಇಮ್ಮಡಿಗೊಳಿಸಿದ್ದಾರೆ.
ಪಕ್ಷಲ್ ಕಟಾರಿಯಾ ಸದರಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ (ಆಲ್ ಇಂಡಿಯಾ ರ‍್ಯಾಂಕಿAಗ್) 2178ನೇ ರ‍್ಯಾಂಕ್ ಗಳಿಸುವುದರ ಜೊತೆಗೆ ‘ಜೆಇಇ’ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಕಮಲೇಶ ಮೂಲಿಮನಿ 14246ನೇ ರ‍್ಯಾಂಕ್ ಗಳಿಸಿ ಮುಂದಿನ ‘ಜೆಇಇ ಅಡ್ವಾನ್ಸ್’ಗೆ ಅರ್ಹತೆ ಪಡೆದಿದ್ದಾರಲ್ಲದೆ, ಭಾರತೀಯ ತಂತ್ರಜ್ಞಾನ ವಿದ್ಯಾಲಯದಲ್ಲಿ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.
ಸಂಸ್ಥೆಯ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ, ಆಡಳಿತ ಮಂಡಳಿಯ ಸದಸ್ಯರಾದ ಪ್ರೊ. ರೋಹಿತ್ ಹಾಗೂ ರಾಹುಲ್ ಒಡೆಯರ್, ಪ್ರೊ. ಪುನೀತ್ ದೇಶಪಾಂಡೆ, ಪ್ರೊ. ಸೈಯದ್ ಮತೀನ್ ಮುಲ್ಲಾ, ಪ್ರಾಚಾರ್ಯರಾದ ಪ್ರೊ. ಪ್ರೇಮಾನಂದ ರೋಣದ, ಆಡಳಿತಾಧಿಕಾರಿ ಎಂ.ಸಿ. ಹಿರೇಮಠ ಹಾಗೂ ಕಾಲೇಜಿನ ಸಮಸ್ತ ಬೋಧಕ, ಬೋಧಕೇತರ ವರ್ಗದವರು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.