HomeEntertainmentಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ಆಕ್ರೋಶ ಹೊರ ಹಾಕಿದ ಬಾಲಿವುಡ್‌ ಸೆಲೆಬ್ರಿಟಿಗಳು

ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ಆಕ್ರೋಶ ಹೊರ ಹಾಕಿದ ಬಾಲಿವುಡ್‌ ಸೆಲೆಬ್ರಿಟಿಗಳು

For Dai;y Updates Join Our whatsapp Group

Spread the love

ಜಮ್ಮು-ಕಾಶ್ಮೀರದ ಪಹಲ್ಗಾಮ್​​ನಲ್ಲಿ ಉಗ್ರರು ದಾಳಿ ನಡೆಸಿ ಹಲವರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಒಟ್ಟು 28 ಜನರು ಮೃತಪಟ್ಟಿದ್ದು, ಕರ್ನಾಟಕದ ಇಬ್ಬರು ಸೇರಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಭರತ್ ಭೂಷಣ್ ಹಾಗೂ ಶಿವಮೊಗ್ಗದ ಉದ್ಯಮಿ ಮಂಜುನಾಥ್‌ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಂಜುನಾಥ್ ಸಾವಿನ ಬಗ್ಗೆ ಮಾಡಿರೋ ಟ್ವೀಟ್​ನ ರೀಟ್ವೀಟ್ ಮಾಡಿಕೊಂಡಿರೋ ರವೀನಾ ಟಂಡನ್ ಆಕ್ರೋಶ ಹೊರ ಹಾಕಿದ್ದಾರೆ.

ಮಂಜುನಾಥ್ ಅವರನ್ನು ಹತ್ಯೆ ಮಾಡುವಾಗ ಅವರ ಪತ್ನಿ ತಮ್ಮನ್ನೂ ಕೊಲ್ಲುವಂತೆ ಕೇಳಿಕೊಂಡಿದ್ದರು. ಆದರೆ, ಅವರನ್ನು ಕೊಲ್ಲದೇ ಉಗ್ರರು ‘ಹೋಗಿ ಮೋದಿಗೆ ಹೇಳು’ ಎಂದಿದ್ದರಂತೆ. ಇದನ್ನು ಮಾಧ್ಯಮಗಳ ಮುಂದೆ ಮಂಜುನಾಥ್ ಪತ್ನಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಮಾಡಿರೋ ಟ್ವೀಟ್​ನ ರವೀನಾ ರೀ ಟ್ವೀಟ್ ಮಾಡಿದ್ದು, ‘ಓಂ ಶಾಂತಿ. ನನ್ನ ಕಡೆಯಿಂದ ಸಂತಾಪ ಸೂಚಿಸುತ್ತೇನೆ. ಆಘಾತ ಮತ್ತು ಕೋಪ ಬರುತ್ತಿದೆ. ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ನಾವೆಲ್ಲರೂ ಆಂತರಿಕ ಜಗಳವನ್ನು ಬಿಟ್ಟು, ಒಂದಾಗಿ ನಿಜವಾದ ಶತ್ರುವನ್ನು ಅರಿತುಕೊಳ್ಳುವ ಸಮಯ’ ಎಂದು ರವೀನಾ ಬರೆದುಕೊಂಡಿದ್ದಾರೆ.

ನಟ ಸೋನು ಸೂದ್‌ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಾಗರಿಕ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ. ಈ ಹೇಯ ಕೃತ್ಯವು ಸ್ವೀಕಾರಾರ್ಹವಲ್ಲ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!