ಸಾರ್ವಜನಿಕರ ಕೆಲಸ ದೇವರ ಕೆಲಸ

0
Spread the love

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಸಾರ್ವಜನಿಕರ ಕೆಲಸ ದೇವರ ಕೆಲಸವೆಂದು ಭಾವಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಗದಗ ಲೋಕಾಯುಕ್ತ ಅಧಿಕಾರಿ ಪಿ.ಜಿ. ಕೌಟಗಿ ಹೇಳಿದರು.

Advertisement

ಅವರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಗದಗ ಲೋಕಾಯುಕ್ತ ಕಾರ್ಯಾಲಯ ಹಾಗೂ ಪ.ಪಂ ಸಹಯೋಗದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದರು.

ಸರಕಾರಿ ಅಧಿಕಾರಿಗಳು ಪ್ರಾಮಾಣಿಕತೆ, ದಕ್ಷತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಾವೆಲ್ಲರೂ ಜನರ ಸೇವೆಗಾಗಿಯೇ ಇರುವುದು. ಹೀಗಾಗಿ ಜನರ ಕೆಲಸಗಳನ್ನು ಶಿಸ್ತುಬದ್ಧವಾಗಿ ಮಾಡಬೇಕು. ಸರಕಾರ ಬಡ ಜನರ ಅನುಕೂಲಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯಗಳು ರೈತರಿಗೆ, ಸಾರ್ವಜನಿಕರಿಗೆ ತಲುಪಿಸಬೇಕು ಎಂದರಲ್ಲದೆ, ಸಾರ್ವಜನಿಕರಿಂದ ಒಟ್ಟು 14 ಅರ್ಜಿಗಳನ್ನು ಪಡೆದು ಇಲಾಖಾವಾರು ಅಧಿಕಾರಿಗಳಿಂದ ಮಾಹಿತಿ ಪಡೆದು ಒಂದು ವಾರದಲ್ಲಿ ಇತ್ಯರ್ಥಪಡಿಸುವುದಾಗಿ ಭರವಸೆ ನೀಡಿದರು.

ಪ.ಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ, ಕೃಷಿ ಅಧಿಕಾರಿ ಮಲ್ಲಯ್ಯ ಕೊರವಣ್ಣವರ, ಉಪ ತಹಸೀಲ್ದಾರ ವಿಜಯಲಕ್ಷ್ಮೀ ವಸ್ತ್ರದ, ಪ.ಪಂ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.


Spread the love

LEAVE A REPLY

Please enter your comment!
Please enter your name here